ಶುಕ್ರವಾರ, ಜನವರಿ 27, 2023
17 °C

ನಿರ್ದೇಶಕ, ನಾಯಕನೇ ‘ರಿಚ್ಚಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ರಿಚ್ಚಿ’ ಇದು ಸಿನಿಮಾ‌ ಹೆಸರು ಮಾತ್ರವಲ್ಲ. ನಿರ್ದೇಶಕ ಹಾಗೂ ನಾಯಕನ ಹೆಸರು ಕೂಡ. ಹೌದು ತಮ್ಮ ಹೆಸರನ್ನೇ ಚಿತ್ರದ ಶೀರ್ಷಿಕೆಯಾಗಿಸಿದ್ದಾರೆ ರಿಚ್ಚಿ. ಚಿತ್ರದ ನಿರ್ಮಾಪಕರೂ ಇವರೆ.‌ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದೆ. ನಾಯಕಿಯಾಗಿ ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಮೋಲ ಅಭಿನಯಿಸಿದ್ದಾರೆ.

ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಕೇಶ್ ರಾವ್ ‘ರಿಚ್ಚಿ’ ಚಿತ್ರದ ಸಹ ನಿರ್ಮಾಪಕರು. ಬೆಂಗಳೂರು, ಮೈಸೂರು, ಮಡಿಕೇರಿ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. 

ಲವ್ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ‌ಕಥಾಹಂದರ ಹೊಂದಿರುವ ಈ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿದೆ.

ಅಗಸ್ತ್ಯ ಸಂತೋಷ್ ಅವರು ಸಂಗೀತ ನೀಡಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿವೆ. ಸೋನು ನಿಗಮ್, ಕುನಾಲ್ ಗಾಂಜಾವಾಲ ಹಾಗೂ ಅಂಕಿತ ಕುಂಡು ಹಾಡುಗಳನ್ನು ಹಾಡಿದ್ದಾರೆ. ಗೌಸ್ ಪೀರ್, ಆನಂದ್ ಹಾಗೂ ವಿನೋದ್ ಹಾಡುಗಳನ್ನು ಬರೆದಿದ್ದಾರೆ. ಹಿಂದಿ ಭಾಷೆಯಲ್ಲಿ ಈ ಚಿತ್ರದ ಹಾಡುಗಳನ್ನು ಜಾವೇದ್ ಅಲಿ, ಪಲಾಕ್ ಮುಚ್ಚಲ್ ಹಾಗೂ ಕುನಾಲ್ ಗಾಂಜಾವಾಲ ಹಾಡಿದ್ದಾರೆ.

ವೀರೇಶ್ ಎನ್.ಟಿ.ಎ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಚಿನ್ನಿಪ್ರಕಾಶ್, ಧನಂಜಯ ಹಾಗೂ ಭೂಷಣ್ ನೃತ್ಯ ನಿರ್ದೇಶನ ಹಾಗೂ ವಿಕ್ರಮ್ ಮೋರ್, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ‌ ಈ ಚಿತ್ರಕ್ಕಿದೆ.

ಮನೋಜ್, ಮಿಮಿಕ್ರಿ ಗೋಪಿ, ಚಂದ್ರಪ್ರಭ, ರಾಘವೇಂದ್ರ ತಾರಾಬಳಗದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.