ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ದೇಶಕ ಮಣಿರತ್ನಂಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

Last Updated 19 ಜುಲೈ 2022, 10:13 IST
ಅಕ್ಷರ ಗಾತ್ರ

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಮಣಿರತ್ನಂಅವರು ಅನಾರೋಗ್ಯದಿಂದಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇಲ್ಲಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ಅವರ ಆರೋಗ್ಯದಸ್ಥಿತಿ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಬೇಕಿದೆ. ಮಣಿರತ್ನಂ ಅವರಿಗೆ ಕೋವಿಡ್‌ ದೃಡಪಟ್ಟಿದೆ ಎಂದು ಸುದ್ದಿಗಳು ಹರಡಿದ್ದವು. ಆದರೆ ಅವರಿಗೆ ಕೋವಿಡ್‌ ನೆಗೆಟಿವ್‌ ವರದಿ ಬಂದಿದೆ ಎಂದುಅವರ ಕುಟುಂಬದಮೂಲಗಳು ತಿಳಿಸಿವೆ.

ಮಣಿರತ್ನಂ ಅವರು ‘ಪೊನ್ನಿಯಿನ್ ಸೆಲ್ವನ್' ಸಿನಿಮಾ ನಿರ್ದೇಶನ ಮಾಡಿದ್ದಾರೆ. ಇದರಲ್ಲಿ ಐಶ್ವರ್ಯ ರೈ ಬಚ್ಚನ್, ವಿಕ್ರಂ, ಜಯಂ ರವಿ, ಕಾರ್ತಿ, ತ್ರಿಷಾ, ಪ್ರಕಾಶ್ ರೈ ಅಭಿನಯಿಸಿದ್ದಾರೆ. ಈ ಸಿನಿಮಾವನ್ನು ₹500 ಕೋಟಿ ಬಜೆಟ್‌ನಲ್ಲಿ ನಿರ್ಮಾಣ ಮಾಡಲಾಗಿದೆ.

ಈ ಚಿತ್ರ ಸೆಪ್ಟೆಂಬರ್‌ ತಿಂಗಳಲ್ಲಿ ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT