ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಕರ್ಕಿ’ಯೊಂದಿಗೆ ಕನ್ನಡಕ್ಕೆ ಬಂದ ಪವಿತ್ರನ್‌

Published : 24 ಆಗಸ್ಟ್ 2024, 0:29 IST
Last Updated : 24 ಆಗಸ್ಟ್ 2024, 0:29 IST
ಫಾಲೋ ಮಾಡಿ
Comments

ನಟ ಪ್ರಭುದೇವ, ಶರತ್‌ ಕುಮಾರ್‌ ಸೇರಿದಂತೆ ಅನೇಕ ಕಲಾವಿದರನ್ನು ನಾಯಕರನ್ನಾಗಿ ಪರಿಚಯಿಸಿದ್ದ ತಮಿಳಿನ ಹಿರಿಯ ನಿರ್ದೇಶಕ ಪವಿತ್ರನ್ ಕನ್ನಡಕ್ಕೆ ಬಂದಿದ್ದಾರೆ. ಅವರು ನಿರ್ದೇಶಿಸಿರುವ ಮೊದಲ ಕನ್ನಡ ಚಿತ್ರ ‘ಕರ್ಕಿ’ ಚಿತ್ರದ ಟ್ರೇಲರ್‌ ಮತ್ತು ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. 

‘ಜಾತಿ ಮತ್ತು ಜನಾಂಗ, ಸ್ನೇಹ, ಪ್ರೀತಿ, ಪ್ರೇಮ ಮತ್ತು ಮಾನವೀಯತೆಯ ಅಂಶಗಳ ಸುತ್ತ ಈ ಸಿನೆಮಾ ಸಾಗುತ್ತದೆ. ನೈಜವಾಗಿ ಸಿನೆಮಾದ ಕಥೆ, ಪಾತ್ರಗಳು ಮೂಡಿಬಂದಿವೆ’ ಎಂದರು ನಿರ್ದೇಶಕರು.

ಸಿನಿಮಾ ವಿತರಕ ಪ್ರಕಾಶ್ ಪಳನಿ ಬಂಡವಾಳ ಹೂಡಿದ್ದಾರೆ. ಈಗಾಗಲೇ ಕೆಲ ಸಿನೆಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಜಯಪ್ರಕಾಶ್ ಈ ಚಿತ್ರದ ನಾಯಕ. ಮಲೆಯಾಳಿ ಬೆಡಗಿ ಮೀನಾಕ್ಷಿ ಇವರಿಗೆ ಜೋಡಿಯಾಗಿದ್ದಾರೆ. 

ಚಿತ್ರ ಸಾಹಿತಿ ಕವಿರಾಜ್ ಮಾತನಾಡಿ, ‘ತಮಿಳಿನ ಹಿರಿಯ ಮತ್ತು ಅನುಭವಿ ನಿರ್ದೇಶಕ ಪವಿತ್ರನ್ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ. ಅರ್ಜುನ್‌ ಜನ್ಯ ಸಂಗೀತ ನಿರ್ದೇಶನದ ಈ ಚಿತ್ರದಲ್ಲಿ ಆರು ಹಾಡುಗಳಿದ್ದು, ಎಲ್ಲಾ ಹಾಡುಗಳಿಗೆ ಸಾಹಿತ್ಯ ಬರೆಯಲು ಅವಕಾಶ ಸಿಕ್ಕಿದೆ’ ಎಂದರು.

ಸಾಧುಕೋಕಿಲ, ಬಲ ರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಹೃಷಿಕೇಶ ಛಾಯಾಚಿತ್ರಗ್ರಹಣ, ಶ್ರೀ ಕ್ರೇಜಿಮೈಂಡ್ಸ್ ಸಂಕಲನವಿದೆ. ಶಿವಮೊಗ್ಗ, ದಾವಣಗೆರೆ, ಬಂಗಾರಪೇಟೆ, ಕೋಲಾರ, ಬಾಗಲಕೋಟೆ ಸುತ್ತಮುತ್ತ ಚಿತ್ರೀಕರಣಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT