ಬೆಂಗಳೂರು: ನಿರ್ದೇಶಕ ‘ಜೋಗಿ’ ಪ್ರೇಮ್ ಅವರಿಗೆ ಅ.22ರಂದು (ಶುಕ್ರವಾರ) ಹುಟ್ಟುಹಬ್ಬದ ಸಂಭ್ರಮ. ಆ ಹಿನ್ನೆಲೆಯಲ್ಲಿ ಅಭಿಮಾನಿಗಳಿಗಾಗಿ ವಿಡಿಯೊ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ಪ್ರೇಮ್ ನಿರ್ಧರಿಸಿದ್ದು, ಸದ್ಯ ತಾವು ‘ಏಕ್ ಲವ್ ಯಾ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವುದಾಗಿ ಹೇಳಿಕೊಂಡಿದ್ದಾರೆ. ಇದರ ನಡುವೆ ದೀಪಾವಳಿ ಹಬ್ಬಕ್ಕೆ ‘ಏಕ್ ಲವ್ ಯಾ’ ಚಿತ್ರದ ಮೂರನೇ ಹಾಡು ಬಿಡುಗಡೆ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಡಿಯೊ ಸಂದೇಶದಲ್ಲೇನಿದೆ?
‘ಅ.22ರಂದು (ಶುಕ್ರವಾರ) ನನ್ನ ಹುಟ್ಟುಹಬ್ಬ. ಪ್ರತಿ ಬಾರಿ ನನ್ನ ಅನ್ನದಾತರು, ಸ್ನೇಹಿತರು ಹಾಗೂ ಬಂಧು-ಬಳಗದವರು ಬಂದು ಶುಭ ಹಾರೈಸುತ್ತಿದ್ರಿ. ಆದರೆ, ಈ ಬಾರಿ ನಾನು ಮನೆಯಲ್ಲಿ ಇರುವುದಿಲ್ಲ. ಯಾಕೆಂದರೆ ಮುಂಬೈನಲ್ಲಿ ‘ಏಕ್ ಲವ್ ಯಾ’ ಸಿನಿಮಾ ಕೆಲಸ ನಡೆಯುತ್ತಿದೆ. ಹಾಗಾಗಿ ತಾವು ಯಾರೂ ಕೂಡ ನನ್ನ ಮನೆ ಬಳಿ ಬರುವುದಾಗಲಿ, ಬಂದು ಕಾಯುವುದಾಗಲಿ ಮಾಡಬೇಡಿ ಅಂತ ಪ್ರೀತಿಯಿಂದ ಮನವಿ ಮಾಡಿಕೊಳ್ಳುತ್ತಿದ್ದೇನೆ. ಎಲ್ಲೇ ಇದ್ದರೂ ದೂರದಿಂದ ನನಗೆ ಆಶೀರ್ವಾದ ಮಾಡಿ’ ಎಂದು ಪ್ರೇಮ್ ಮನವಿ ಮಾಡಿದ್ದಾರೆ.

‘ನ.4ರಂದು ದೀಪಾವಳಿ ಹಬ್ಬದ ದಿನ ‘ಏಕ್ ಲವ್ ಯಾ’ ಸಿನಿಮಾದ ಮೂರನೇ ಹಾಡು ಬಿಡುಗಡೆ ಮಾಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಆಗಿರುವ 2 ಹಾಡುಗಳನ್ನು ದೊಡ್ಡ ಹಿಟ್ ಮಾಡಿಕೊಟ್ಟಿದ್ದೀರಿ. ಈಗ ಮೂರನೇ ಹಾಡು ಬರುತ್ತಿದೆ. ಇದು ಲವ್ ಬ್ರೇಕಪ್ ಸಾಂಗ್ ಆಗಿದ್ದು, ಹುಡುಗಿಯರಿಗಾಗಿ ಮಾಡಿರುವ ವಿಶೇಷ ಹಾಡು. ಆ ಹಾಡು ನೋಡಿ ಹಾರೈಸಿ. ಜನವರಿ 21ಕ್ಕೆ ಎಲ್ಲ ಕಡೆ ಈ ಸಿನಿಮಾ ಬಿಡುಗಡೆಯಾಗಲಿದೆ’ ಎಂದು ಪ್ರೇಮ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.