ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂತ ಕೋಲ ಹಿಂದೂ ಸಂಸ್ಕೃತಿ: ರಿಷಬ್ ಶೆಟ್ಟಿ ಹೇಳಿಕೆ ಸುಳ್ಳೆಂದ ಚೇತನ್ 'ಅಹಿಂಸಾ'

Last Updated 19 ಅಕ್ಟೋಬರ್ 2022, 8:41 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಚಲನಚಿತ್ರ ‘ಕಾಂತಾರ’ ಯಶಸ್ಸು ಸಾಧಿಸಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿರುವ ನಟ ‘ಆ ದಿನಗಳು’ ಖ್ಯಾತಿಯ ಚೇತನ್‌, ನಟ ರಿಷಬ್‌ ಶೆಟ್ಟಿ ಅವರ ಹೇಳಿಕೆಯೊಂದನ್ನು ಅಲ್ಲಗಳೆದಿದ್ದಾರೆ.

ಈ ಬಗ್ಗೆ ಮಂಗಳವಾರ ಟ್ವೀಟ್‌ ಮಾಡಿರುವ ಅವರು, ‘ನಮ್ಮ ಕನ್ನಡ ಚಿತ್ರ ‘ಕಾಂತಾರ’ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ತಂದಿದೆ. ಆದರೆ, ಭೂತಕೋಲ ಹಿಂದೂ ಸಂಸ್ಕೃತಿ ಎಂದು ಹೇಳಿರುವ ರಿಷಬ್ ಶೆಟ್ಟಿ ಅವರ ಮಾತು ಸುಳ್ಳು. ನಮ್ಮ ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳು. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಹಿಂದಿನವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆ ಮತ್ತು ಹೊರಗೆ ಸತ್ಯದೊಂದಿಗೆ ಪ್ರದರ್ಶಿಸಬೇಕು ಎಂದು ನಾನು ಕೋರುತ್ತೇನೆ’ ಎಂದು ಹೇಳಿಕೊಂಡಿದ್ದಾರೆ.

ಕರಾವಳಿ ಭಾಗದ ದೈವಗಳ ಆರಾಧನೆ, ತುಳು ಸಂಸ್ಕೃತಿಯನ್ನು ಕಾಂತಾರ ಸಿನಿಮಾದಲ್ಲಿ ಪ್ರಧಾನವಾಗಿ ಬಿಂಬಿಸಲಾಗಿದೆ. ಪ್ರಕೃತಿಗೂ, ಮನುಷ್ಯನಿಗೂ ಇರುವ ಸಂಬಂಧ, ಭೂತಾರಾಧನೆ, ಈ ಆಚರಣೆ ನ್ಯಾಯದ ವೇದಿಕೆಯಾಗಿ ಹೇಗೆ ಮಹತ್ವ ಪಡೆದಿದೆ ಎನ್ನುವುದನ್ನು ಸಿನಿಮಾದಲ್ಲಿ ವಿವರಿಸಲಾಗಿದೆ.

ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿರುವ ‘ಕಾಂತಾರ’ವನ್ನು ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರಿಷಬ್‌ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಹೊಂಬಾಳೆ ಫಿಲಂಸ್‌ ಚಿತ್ರವನ್ನು ನಿರ್ಮಿಸಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT