ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲವ್ 360‘ ಸಿನಿಮಾ ನೋಡಿ ಎಂದು ಪ್ರೇಕ್ಷಕರಲ್ಲಿ ಮನವಿ ಮಾಡಿದ ನಿರ್ದೇಶಕ ಶಶಾಂಕ್

Last Updated 21 ಆಗಸ್ಟ್ 2022, 11:22 IST
ಅಕ್ಷರ ಗಾತ್ರ

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾದ'ಲವ್ 360' ಸಿನಿಮಾನೋಡುವಂತೆ ಪ್ರೇಕ್ಷಕರಲ್ಲಿ ನಿರ್ದೇಶಕ ಶಶಾಂಕ್‌ ಮನವಿ ಮಾಡಿಕೊಂಡಿದ್ದಾರೆ.

ಎಮೋಷನಲ್ ಪ್ರೇಮ ಕಥೆಯ ಈ ಸಿನಿಮಾಇದು. ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ. ಚಿತ್ರದಲ್ಲಿನ ರಾಮ್ ಹಾಗೂ ಜಾನಕಿ ಪ್ರೇಮಕಥೆ ಸಾಕಷ್ಟು ಜನರಿಗೆ ಇಷ್ಟವಾಗಿದೆ.

ದೊಡ್ಡಮಟ್ಟದಲ್ಲಿ ಜನರು ಚಿತ್ರಮಂದಿರಗಳಿಗೆ ಬಂದು ಸಿನಿಮಾ ನೋಡುತ್ತಿಲ್ಲ ಎಂಬುದು ಶಶಾಂಕ್‌ಅಳಲು. ಚಿತ್ರರಂಗದಲ್ಲಿ ಹೊಸ ಮುಖಗಳಿಗೆ ಪ್ರೋತ್ಸಾಹ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ಮಂದಿರಗಳಿಗೆ ತೆರಳಿ ಚಿತ್ರವನ್ನು ವೀಕ್ಷಣೆ ಮಾಡುವಂತೆ ಪ್ರೇಕ್ಷಕರಲ್ಲಿ ಕೈಮುಗಿದು ಮನವಿ ಮಾಡಿದ್ದಾರೆ.

ಶಶಾಂಕ್‌ ಮನವಿ ಮಾಡಿಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ಚಂದನವನದ ಹಲವಾರು ಸೆಲೆಬ್ರಿಟಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

ನಟ ಉಪೇಂದ್ರ, ನಿರ್ದೇಶಕ ಯೋಗರಾಜ್‌ ಭಟ್‌ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಹೊಸ ಪ್ರತಿಭೆ ಪ್ರವೀಣ್ ನಾಯಕರಾಗಿದ್ದಾರೆ. ಅವರಿಗೆ ರಚನಾ ಇಂದರ್ ಜೋಡಿಯಾಗಿದ್ದಾರೆ. ಹೊಸ ಮುಖಗಳಿಗೆ ಶಶಾಂಕ್‌ ಆ್ಯಕ್ಷನ್‌ ಕಟ್‌ ಹೇಳಿರುವುದು ವಿಶೇಷ. ಈ ಹಿಂದೆ'ಕೃಷ್ಣನ್ ಲವ್ ಸ್ಟೋರಿ', 'ಮೊಗ್ಗಿನ ಮನಸು' 'ಕೃಷ್ಣಲೀಲಾ' ರೀತಿಯ ಹಿಟ್ ಸಿನಿಮಾಗಳನ್ನು ಶಶಾಂಕ್ ನಿರ್ದೇಶನ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT