ಶನಿವಾರ, ಜನವರಿ 22, 2022
16 °C

ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ನೆನೆದು ಭಾವುಕರಾದ ಖ್ಯಾತ ನಿರ್ದೇಶಕ ರಾಜಮೌಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆರ್‌ಆರ್‌ಆರ್‌ ಚಿತ್ರದ ‘ಜನನಿ’ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಆಗಮಿಸಿದ್ದ ಖ್ಯಾತ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ, ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇಷ್ಟು ದಿನ ಕಳೆದರೂ ಎಲ್ಲರೂ ಇನ್ನೂ ಆಘಾತದಲ್ಲಿದ್ದೇವೆ. ಒಂದೆರಡು ಬಾರಿಯಷ್ಟೇ ನಾನು ಪುನೀತ್‌ ಅವರನ್ನು ಭೇಟಿಯಾಗಿದ್ದೆ. ನಾಲ್ಕು ವರ್ಷದ ಹಿಂದೆ ಇದೇ ಮನೆಯಲ್ಲಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೆ. ಆ ಸಂದರ್ಭದಲ್ಲಿ ಒಬ್ಬ ಸ್ಟಾರ್‌ ನಟನೊಂದಿಗೆ ಮಾತನಾಡುತ್ತಿದ್ದೇನೆ ಎಂದು ನನಗೆ ಅನಿಸಲೇ ಇಲ್ಲ. ಪಕ್ಕದ ಮನೆಯವರ ಜೊತೆ ಮಾತನಾಡಿದಂತೆ ಇತ್ತು. ಹೀಗಾಗಿದೆ ಎಂದು ಯೋಚಿಸಿದಾಗಲೇ ಹೃದಯ ಭಾರವಾಗುತ್ತದೆ. ಈ ನೋವನ್ನು ಮಾತಿನಲ್ಲಿ ವಿವರಿಸಲು ಸಾಧ್ಯವಿಲ್ಲ. ಪ್ರಸಕ್ತ ಸಮಾಜದಲ್ಲಿ ಒಬ್ಬರಿಗೆ ಸಹಾಯ ಮಾಡಿದರೆ ಇಡೀ ಜಗತ್ತಿಗೆ ತಿಳಿಯಬೇಕು ಎಂದು ನಾವು ಆಶಿಸುತ್ತೇವೆ. ಆದರೆ ಪುನೀತ್‌ ಅವರು ಈ ಬಗ್ಗೆ ಮೌನವಾಗಿದ್ದರು. ಅವರ ನಿಧನದ ಬಳಿಕವಷ್ಟೇ ಅವರ ಕೆಲಸ ಕಾರ್ಯಗಳು ಬೆಳಕಿಗೆ ಬಂದವು’ ಎಂದು ನೆನಪಿಸಿಕೊಂಡರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು