ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಲ್ಡ್‌ ಲುಕ್‌ನಲ್ಲಿ ಬಾಲಿವುಡ್‌ ಬೆಡಗಿ ದಿಶಾ ಪಟಾನಿ: ಹಾಟ್ ಫೋಟೊ ವೈರಲ್

ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟಿ ದಿಶಾ ಪಟಾನಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸ್ಟ್ರಾಪ್‌ಲೆಸ್ ಬಾಡಿಕಾನ್ ಗೌನ್‌ನಲ್ಲಿ ದಿಶಾ ಪಟಾನಿ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿರುವ ಫೋಟೊಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ದಿಶಾ ಪಟಾನಿ ಅಭಿನಯದ ‘ಏಕ್ ವಿಲನ್ ರಿಟರ್ನ್ಸ್‌’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರತಂಡದೊಂದಿಗೆ ನಟಿ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರೆ.

ಈ ಸಿನಿಮಾದಲ್ಲಿ ಅರ್ಜುನ್ ಕಪೂರ್ ಮತ್ತು ಜಾನ್ ಅಬ್ರಹಾಂ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ದೊಡ್ಡ ಅಭಿಮಾನಿ ಬಳಗ ಹೊಂದಿರುವ ದಿಶಾ ಪಟಾನಿ, ಫಿಟ್‌ನೆಸ್‌, ಪ್ರವಾಸ, ಹಬ್ಬ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ಕ್ಲಿಕ್ಕಿಸಿದ ಫೋಟೊ, ವಿಡಿಯೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಇತ್ತೀಚೆಗೆ ದಿಶಾಳ ಹೆಸರು ನಟ ಟೈಗರ್ ಶ್ರಾಫ್ ಜತೆಗೆ ಕೇಳಿಬಂದಿತ್ತು. ಇಬ್ಬರೂ ಜತೆಯಾಗಿ ಮಾಲ್ಡೀವ್ಸ್‌ನ ಬೀಚ್‌ಗಳಲ್ಲಿ ಕಾಲ ಕಳೆದಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ದಿಶಾ ಪೋಸ್ಟ್ ಮಾಡಿರುವ ಫೋಟೊಗಳಿಗೆ ಟೈಗರ್ ಶ್ರಾಫ್ ಸಹೋದರಿ ಕೃಷ್ಣ ಶ್ರಾಫ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT