ಶುಕ್ರವಾರ, ಡಿಸೆಂಬರ್ 3, 2021
22 °C

ಮೂಗಿಗೆ ಸರ್ಜರಿ ಮಾಡಿಸಿಕೊಂಡರೇ ದಿಶಾ ಪಟಾನಿ: ವಿಡಿಯೊ ವೈರಲ್!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Disha Patani Instagram

ಬೆಂಗಳೂರು: ಬಾಲಿವುಡ್‌ನಲ್ಲಿ ಸದಾ ಸುದ್ದಿಯಲ್ಲಿರುವ ನಟಿಯರ ಪೈಕಿ ದಿಶಾ ಪಟಾನಿ ಕೂಡ ಒಬ್ಬರು..

ದಿಶಾ ಅವರು ಹೆಚ್ಚು ಸದ್ದು ಮಾಡುವುದು ಪ್ರವಾಸ, ಬೀಚ್ ಮತ್ತು ಇನ್‌ಸ್ಟಾಗ್ರಾಂ ಪೋಸ್ಟ್ ಮೂಲಕ..

ಆದರೆ ಇತ್ತೀಚೆಗೆ ಅವರು ಸಿನಿಮಾದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಅದರಲ್ಲಿ ದಿಶಾ ಪಟಾನಿ ಅವರ ಮೂಗಿನ ವಿನ್ಯಾಸದಲ್ಲಿ ಬದಲಾವಣೆ ಕಾಣಿಸಿಕೊಂಡಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

ವೈರಲ್ ಭಯಾನಿ ಪೋಸ್ಟ್ ಮಾಡಿರುವ ಈ ವಿಡಿಯೊದಲ್ಲಿ ದಿಶಾ ಅವರ ಮೂಗು ನೋಡಲು ಈ ಹಿಂದಿಗಿಂತ ಭಿನ್ನವಾಗಿದೆ ಎಂದು ಹಲವು ಮಂದಿ ಕಾಮೆಂಟ್ ಮಾಡಿದ್ದಾರೆ.

ಅದರ ಬೆನ್ನಲ್ಲೇ, ದಿಶಾ ಅವರು ಮೂಗಿನ ಸರ್ಜರಿ ಮಾಡಿಸಿಕೊಂಡಿದ್ದಾರೆ ಎನ್ನುವ ಮಾತು ಕೂಡ ಕೇಳಿಬಂದಿದೆ.

ಆದರೆ ಈ ಬಗ್ಗೆ ದಿಶಾ ಅವರು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು