ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಿಶಾ’ ರೇಪ್ ಕೇಸ್: ಅಕ್ಷಯ್, ಸಲ್ಮಾನ್ ಸೇರಿದಂತೆ 38 ನಟ–ನಟಿಯರಿಗೆ ಸಂಕಷ್ಟ!

Last Updated 7 ಸೆಪ್ಟೆಂಬರ್ 2021, 8:08 IST
ಅಕ್ಷರ ಗಾತ್ರ

ಬೆಂಗಳೂರು: 2019 ರಲ್ಲಿ ಹೈದರಾಬಾದ್‌ನಲ್ಲಿ ನಡೆದಿದ್ದ ‘ದಿಶಾ‘ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹೆಸರು ಬಹಿರಂಗ ಪಡಿಸಿದ್ದಕ್ಕಾಗಿ ಬಾಲಿವುಡ್ ನಟರಾದ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ 38 ನಟ–ನಟಿಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಾಗಿದೆ.

ದೆಹಲಿ ಮೂಲದ ಗೌರವ್ ಗುಲಾಟಿ ಎಂಬ ವಕೀಲರು ದೆಹಲಿಯ ಸಬ್ಜಿ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ‘ದಿಶಾ ಅತ್ಯಾಚಾರ ಪ್ರಕರಣದಲ್ಲಿ, ಜವಾಬ್ದಾರಿಯುತ ನಾಗರಿಕರಾಗಿರಬೇಕಾದವರು ಸಂತ್ರಸ್ತೆಯ ನಿಜವಾದ ಹೆಸರು ಹಾಗೂ ಊರು ಬಹಿರಂಗಪಡಿಸಿದ್ದಾರೆ‘ ಎಂದು ಆರೋಪಿಸಿದ್ದಾರೆ. ಅಲ್ಲದೇ ಈ ಕುರಿತು ತೀಸ್ ಹಜಾರಿ ನ್ಯಾಯಾಲಯದಲ್ಲಿ ಅರ್ಜಿ ಕೂಡ ದಾಖಲಿಸಿದ್ದಾರೆ.

‘ಅನುಪಮ್ ಖೇರ್, ಪರ್ಹಾನ್ ಅಕ್ತರ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಸಲ್ಮಾನ್ ಖಾನ್, ರವಿ ತೇಜ, ರಾಕುಲ್ ಪ್ರೀತ್ ಸಿಂಗ್, ಅಲ್ಲು ಸೀರಿಶ್, ಚಾರ್ಮಿ ಕೌರ್ ಸೇರಿದಂತೆ 38 ನಟ ನಟಿಯರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಂತ್ರಸ್ತೆಯ ನಿಜವಾದ ಹೆಸರು ಬಹಿರಂಗಪಡಿಸಿ ಕಾನೂನು ಉಲ್ಲಂಘಿಸಿದ್ದಾರೆ’ಎಂದು ವಕೀಲಗುಲಾಟಿ ಆರೋಪಿಸಿದ್ದಾರೆ.

ಅಲ್ಲದೇ, ಕಾನೂನು ಉಲ್ಲಂಘಿಸಿರುವ ಈ ನಟ–ನಟಿಯರನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ಕೋರಿದ್ದಾರೆ. ನವೆಂಬರ್ 28, 2019 ರಂದು ಹೈದರಾಬಾದ್‌ನ ಸೈಬರಾಬಾದ್ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪಶುವೈದ್ಯೆಯೊಬ್ಬರನ್ನು ನಾಲ್ವರು ಕಾಮುಕರು ಅಪಹರಿಸಿ, ಅತ್ಯಾಚಾರ ಮಾಡಿ, ಸುಟ್ಟು ಹಾಕಿದ್ದರು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಎನ್‌ಕೌಂಟರ್ ಮಾಡಿದ್ದರು. ಈ ಪ್ರಕರಣ ‘ದಿಶಾ ಅತ್ಯಾಚಾರ ಪ್ರಕರಣ’ಎಂದು ದೇಶಾದ್ಯಂತ ಸದ್ದು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT