ಬುಧವಾರ, ಜುಲೈ 6, 2022
21 °C

‘ಹಿರಣ್ಯ’ ಸೆಟ್‌ಗೆ ದಿವ್ಯಾ ಸುರೇಶ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ರೌಡಿ ಬೇಬಿ’ ಸಿನಿಮಾ ಮುಖಾಂತರ ನಾಯಕಿಯಾಗಿ ಚಂದನವನಕ್ಕೆ ಹೆಜ್ಜೆ ಇಟ್ಟ ಬಿಗ್‌ಬಾಸ್‌ ಖ್ಯಾತಿಯ ನಟಿ ದಿವ್ಯಾ ಸುರೇಶ್‌, ಇದೀಗ ಮತ್ತೊಂದು ಸಿನಿಮಾಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.

ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಾಯಕನಾಗಿ ನಟಿಸುತ್ತಿರುವ ‘ಹಿರಣ್ಯ’ ಸಿನಿಮಾದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ. ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ವಿಶೇಷ ಪಾತ್ರವೊಂದರಲ್ಲಿ ದಿವ್ಯಾ ಕಾಣಿಸಿಕೊಳ್ಳಲಿದ್ದು, ಮಾರ್ಚ್‌ 9ರಿಂದ ಚಿತ್ರೀಕರಣ ಆರಂಭವಾಗಲಿದೆ. ‘ನಾನು ಹಾಗೂ ರಾಜವರ್ಧನ್‌ ಸ್ನೇಹಿತರು. ಇಬ್ಬರು ಒಟ್ಟಿಗೆ ನಟಿಸುವ ಅವಕಾಶ ಈ ಸಿನಿಮಾ ಮೂಲಕ ನನಸಾಗುತ್ತಿದೆ’ ಎನ್ನುವುದು ದಿವ್ಯಾ ಮಾತು.

‘ಹಿರಣ್ಯ’ ಸಿನಿಮಾದಲ್ಲಿ ರಾಜವರ್ಧನ್‌ಗೆ ನಾಯಕಿಯಾಗಿ ರಿಹಾನಾ ನಟಿಸುತ್ತಿದ್ದು, ಇದು ಅವರ ಚೊಚ್ಚಲ ಚಿತ್ರ. ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾದ ವಿಘ್ನೇಶ್ವರ ಯು. ಮತ್ತು ವಿಜಯ್ ಕುಮಾರ್ ಬಿವಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು