ಶನಿವಾರ, ಮಾರ್ಚ್ 25, 2023
30 °C

ದೀಪಾವಳಿ ಸಂಭ್ರಮ: ರಾಯನ್‌ ಫೋಟೊ ಹಂಚಿಕೊಂಡ ನಟಿ ಮೇಘನಾ ರಾಜ್‌

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ ಅವರು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ.

ಮೇಘನಾ ಅವರು ಮಗ ರಾಯನ್‌ ರಾಜ್‌ ಸರ್ಜಾ ಫೋಟೊವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ಇದು ರಾಯನ್‌ನ ಹಲವು ಭಾವ ಭಂಗಿ. ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ಮಗು ನನ್ನ ವಿಸ್ಮಯ. ಈ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಹೊಳಪು –ಬೆಳಕು ತರಲಿ. ರಾಯನ್ ಈ ದೀಪಾವಳಿಯಲ್ಲಿ ಸಖತ್ ಬ್ರೈಟ್ ಆಗಿ ಮಿಂಚುತ್ತಿದ್ದಾನೆ’ ಎಂದು ಬರೆದುಕೊಂಡಿದ್ದಾರೆ.

ಮೇಘನಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದು, ರಾಯನ್‌ ಜೊತೆಗಿನ ಫೋಟೊ ಮತ್ತು ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ರಾಯನ್‌ಗೆ ಮೊದಲ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು.

ಇದನ್ನೂ ಓದಿ... ದೀಪಾವಳಿ ಸಂಭ್ರಮ: ತೆಲುಗು ನಟ ರಾಮ್‌ ಚರಣ್, ಅಲ್ಲು ಅರ್ಜುನ್‌ ಮನೆಯಲ್ಲಿ ಸಡಗರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು