ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಡಾಲರ್ಸ್ ಪೇಟೆ’ಯ ನೋಟ ಹೀಗಿದೆ

Last Updated 8 ಜನವರಿ 2023, 11:13 IST
ಅಕ್ಷರ ಗಾತ್ರ

ಮೋಹನ್ ಎನ್. ಮುನಿನಾರಾಯಣಪ್ಪ ಆಕ್ಷನ್ ಕಟ್ ಹೇಳಿರುವ ‘ಡಾಲರ್ಸ್ ಪೇಟೆ’ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ. ‘ಮಾರ್ಫಿ’, ‘ಮದಗಜ’ ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮೋಹನ್ ಎನ್. ಮುನಿನಾರಾಯಣಪ್ಪ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕನಾಗಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಕಥೆಯೂ ಅವರದ್ದೇ. ಹೈಪರ್ ಲಿಂಕ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ.

ಈ ಚಿತ್ರದಲ್ಲಿ ಸೌಮ್ಯ ಜಗನ್ ಮೂರ್ತಿ, ಆಕರ್ಷ್ ಕಮಲ, ವೆಂಕಟ್‌ರಾಜು ಪ್ರಮುಖ ಪಾತ್ರದಲ್ಲಿದ್ದಾರೆ. ಪೃಥ್ವಿ ಅಂಬರ್ ಅತಿಥಿ ಪಾತ್ರದಲ್ಲಿದ್ದಾರೆ. ಉಳಿದಂತೆ ಕುಶಾಲ್‌ ಎಸ್., ದತ್ತು, ರಾಘವೇಂದ್ರ, ಡ್ರಾಮಾ ಜೂನಿಯರ್ಸ್ ಮಹೇಂದ್ರ ಒಳಗೊಂಡ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಸೂರಜ್ ಜೋಯಿಸ್ ಸಂಗೀತ ನಿರ್ದೇಶನ, ಆನಂದ್ ಸುಂದರೇಶ ಕ್ಯಾಮೆರಾ ವರ್ಕ್, ಮಹೇಶ್ ತೊಗಟ್ಟ ಸಂಕಲನ, ಅರ್ಜುನ್ ರಾಜ್ ಮತ್ತು ನರಸಿಂಹ ಸಾಹಸ ನಿರ್ದೇಶನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT