ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ರತ್ನನ್ ಪ್ರಪಂಚ’ ಕನ್ನಡ ಸಿನಿಮಾ ಅಕ್ಟೋಬರ್ 22 ಕ್ಕೆ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ.

ಈ ವಿಚಾರವನ್ನು ಇಂದು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಓಟಿಟಿಯಲ್ಲಿ ನೇರವಾಗಿ ಬಿಡುಗಡೆಯಾಗುತ್ತಿರುವ ಕನ್ನಡ ಪ್ರಮುಖ ಚಿತ್ರ ಇದಾಗಿದೆ.

ಕೆಆರ್ಜೆ ಸ್ಟುಡಿಯೊ ಅಡಿ ನಿರ್ಮಾಣವಾಗುತ್ತಿರುವ ಈ ಚಿತ್ರ ರೋಹಿತ್ ಪದಕಿ ನಿರ್ದೇಶನದಲ್ಲಿ ಮೂಡಿ ಬಂದಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಅವರು ನಿರ್ಮಾಪಕರಾಗಿದ್ದಾರೆ.

ವಿಶಿಷ್ಟ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ್ಗೆ ಮಲೆಯಾಳಂನ ರೆಬ್ಬಾ ಮೊನಿಕಾ ಜಾನ್ ಅವರು ಜೊತೆಯಾಗಿ ನಟಿಸಿದ್ದಾರೆ. ಉಮಾಶ್ರೀ, ಪಂಜು, ರವಿಶಂಕರ್ ಗೌಡ ತಾರಾಗಣದಲ್ಲಿದ್ದಾರೆ.

ಕೊರೊನಾ ಎರಡನೇ ಅಲೆ ನಂತರ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ 100 ರಷ್ಟು ಭರ್ತಿಗೆ ಅವಕಾಶ ನೀಡಿದರೂ ರತ್ನನ್ ಪ್ರಪಂಚ ನೇರವಾಗಿ ಓಟಿಟಿಯಲ್ಲೇ ಬಿಡುಗಡೆಯಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.