ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಾಳ್ಮೆ ಕಳೆದುಕೊಳ್ಳುವುದು ಬೇಡ:ಅಭಿಮಾನಿಗಳಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನವಿ

ಇನ್‌ಸ್ಟಾಗ್ರಾಂ ಮೂಲಕ ಮನವಿ‌ ಮಾಡಿದ್ದಾರೆ.
Published 26 ಜೂನ್ 2024, 17:33 IST
Last Updated 26 ಜೂನ್ 2024, 17:33 IST
ಅಕ್ಷರ ಗಾತ್ರ

ಬೆಂಗಳೂರು: 'ನನಗೆ, ನಿಮಗೆ, ನಮ್ಮೆಲ್ಲರಿಗೆ ಇದು ಅಗ್ನಿಪರೀಕ್ಷೆಯ ಸಮಯ. ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದ ಇರೋಣ'

- ಹೀಗೆ ಮನವಿ ಮಾಡಿರುವುದು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು‌ ನ್ಯಾಯಾಂಗ ಬಂಧನದಲ್ಲಿ ಇರುವ ಅವರನ್ನು ನೋಡಲು ಅಭಿಮಾನಿಗಳು ಪರಪ್ಪನ‌ ಅಗ್ರಹಾರ ಜೈಲಿನತ್ತ‌ ಬರುತ್ತಿದ್ದಾರೆ. ಈ‌ ಹಿನ್ನೆಲೆಯಲ್ಲಿ ಅವರು‌ ಇನ್‌ಸ್ಟಾಗ್ರಾಂ ಮೂಲಕ ಮನವಿ‌ ಮಾಡಿದ್ದಾರೆ.

'ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ಅಭಿಮಾನಿಗಳು ಎಂದರೆ ಅಪಾರ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ಅಭಿಮಾನಿಗಳನ್ನು ತಮ್ಮ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ನಿಮ್ಮ ಆತಂಕವನ್ನು ದರ್ಶನ್ ಅವರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯಗಳ ಮೇಲೆ ವಿಶ್ವಾಸ ಇಡೋಣ. ನ್ಯಾಯ ಸಿಗುವ ಸಂಪೂರ್ಣ ವಿಶ್ವಾಸ ನನಗಿದೆ. ಇಂತಹ ಕಷ್ಟದ ಸಮಯದಲ್ಲಿ ದರ್ಶನ್ ಅವರ ಅನುಪಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಅವರಿಗೆ ಕೇಡು ಬಯಸುವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಮತ್ತೆ ಒಳ್ಳೆಯ ಸಮಯ ಮರಳಿ ಬರಲಿದೆ. ಸತ್ಯ ಮೇವ ಜಯತೆ ಎಂದು ಅವರು ಪೋಸ್ಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT