ಮಂಗಳವಾರ, ಆಗಸ್ಟ್ 9, 2022
23 °C

‘ದೂರದರ್ಶನ’ದೊಳಗೆ ಪೃಥ್ವಿಗೆ ಆಯಾನಾ ಜೋಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

‘ದಿಯಾ’ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ನಟನೆಯ ‘ದೂರದರ್ಶನ’ದ ಟೈಟಲ್‌ ಟೀಸರ್‌ ಈಗಾಗಲೇ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ ಪೃಥ್ವಿಗೆ ಜೋಡಿ ಯಾರು ಎನ್ನುವ ಪ್ರಶ್ನೆಗೆ ಇದೀಗ ಚಿತ್ರತಂಡ ಉತ್ತರಿಸಿದೆ. ‘ಇಲ್ಲಿ ಇರಲಾರೆ ಅಲ್ಲಿಗೆ ಹೋಗಲಾರೆ’ ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಹೆಜ್ಜೆ ಇಟ್ಟಿದ್ದ ಆಯಾನಾ ಪೃಥ್ವಿಗೆ ನಾಯಕಿಯಾಗಿ ಅಭಿನಯಿಸಿದ್ದಾರೆ. 

‘ಆಯಾನಾ ‘ಮೈತ್ರಿ’ ಎಂಬ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಆಟೊ ಚಾಲಕನ ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ’ ಎನ್ನುತ್ತಾರೆ ನಿರ್ದೇಶಕ ಸುಕೇಶ್ ಶೆಟ್ಟಿ. ‘ಅಪ್ಪನ ಆಸೆಯಲ್ಲಿ ಬೆಳೆಯುವ ಹುಡುಗಿ ಪ್ರೀತಿಯಲ್ಲಿ ಬಿದ್ದಾಗ ಮುಂದೇನಾಗುತ್ತದೆ ಎನ್ನುವುದು ಚಿತ್ರದ ಕಥೆಯಲ್ಲಿ ಮೈತ್ರಿಯ ಅಧ್ಯಾಯ.

ಇದು ಕಥೆಗೆ ತಿರುವು ನೀಡುವ ಪಾತ್ರ’ ಎಂದರು. ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಸುಂದರ್ ವೀಣಾ ಕಾಣಿಸಿಕೊಂಡಿದ್ದು, ಉಳಿದಂತೆ ತಾರಾಗಣದಲ್ಲಿ ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಮುಂತಾದವರಿದ್ದಾರೆ.

ಇದು ಸುಕೇಶ್‌ ಶೆಟ್ಟಿ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾಗೆ ಕಥೆ, ಚಿತ್ರಕಥೆಯೂ ಅವರದ್ದೇ. ನೈಜ ಘಟನೆ ಹಾಗೂ ಕಾಲ್ಪನಿಕ ಕಥೆ ಬೆರೆತ ಸಿನಿಮಾವಾಗಿರುವ ‘ದೂರದರ್ಶನ’ದ ಚಿತ್ರೀಕರಣವು ದಕ್ಷಿಣ ಕನ್ನಡದ ಆರ್ಲಪದವಿನಲ್ಲಿ 38 ದಿನ ನಡೆದಿದೆ.

ವಿಎಸ್ ಮೀಡಿಯಾ ಎಂಟರ್‌ಪ್ರೈಸಸ್ ಬ್ಯಾನರ್‌ನಡಿ ರಾಜೇಶ್ ಭಟ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಛಾಯಾಗ್ರಹಣ, ನಂದೀಶ್ ಟಿ.ಜಿ. ಸಂಭಾಷಣೆ, ಪ್ರದೀಪ್ ಆರ್. ರಾವ್ ಸಂಕಲನ ಚಿತ್ರಕ್ಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು