ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ರಾಜ್‌ಕುಮಾರ್‌ ಪುಣ್ಯಸ್ಮರಣೆ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

Last Updated 12 ಏಪ್ರಿಲ್ 2022, 8:14 IST
ಅಕ್ಷರ ಗಾತ್ರ

ಇಂದು ವರನಟ ಡಾ.ರಾಜ್‌ಕುಮಾರ್‌ ಅವರ ಪುಣ್ಯಸ್ಮರಣೆ. ರಾಜ್‌ಕುಮಾರ್‌ ಅವರು ಅಗಲಿ 16 ವರ್ಷಗಳು ಕಳೆದಿದ್ದು, ಈ ಸಂದರ್ಭದಲ್ಲಿ ದೊಡ್ಮನೆ ಕುಟುಂಬದ ಸದಸ್ಯರು ಕಂಠೀರವ ಸ್ಟುಡಿಯೊದಲ್ಲಿರುವ ರಾಜ್‌ಕುಮಾರ್‌ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ರಾಜ್‌ಕುಮಾರ್‌ ಅವರ ಪುತ್ರರಾದ ಶಿವರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌, ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸೇರಿದಂತೆ ಕುಟುಂಬದ ಸದಸ್ಯರು ಪುಷ್ಪನಮನ ಸಲ್ಲಿಸಿ, ಅಗರಬತ್ತಿ ಹಚ್ಚಿದರು.ಸಮಾಧಿಯ ಮುಂದೆ ರಾಜ್‌ಕುಮಾರ್‌ ಅವರ ನೆಚ್ಚಿನ ತಿಂಡಿ, ಸಿಹಿ ತಿನಿಸುಗಳನ್ನು ಎಡೆ ಇಡಲಾಗಿತ್ತು. ಸಾವಿರಾರು ಅಭಿಮಾನಿಗಳು ರಾಜ್‌ಕುಮಾರ್‌ ಅವರ ಸಮಾಧಿಗೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು. ಪುಣ್ಯಸ್ಮರಣೆ ಅಂಗವಾಗಿ ರಾಜ್ಯದ ಹಲವೆಡೆ ರಾಜ್‌ಕುಮಾರ್ ಅಭಿಮಾನಿಗಳು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

ಪುಣ್ಯಸ್ಮರಣೆಯಂದು ರಾಜ್‌ಕುಮಾರ್‌ ಅವರನ್ನು ಸ್ಮರಿಸಿ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿದ್ದಾರೆ. ‘ಕನ್ನಡಿಗರ ಹೆಮ್ಮೆ, ಕಲಾಸರಸ್ವತಿಯ ವರಪುತ್ರ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ಅಣ್ಣಾವ್ರು ಕನ್ನಡಿಗರ ಹೃದಯಮಂದಿರದಲ್ಲಿ ಚಿರಸ್ಥಾಯಿಯಾಗಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT