ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲುಗಿನಲ್ಲಿ ತಯಾರಾಗುತ್ತಿರುವ ‘ಕಣ್ಣಪ್ಪ’ ಚಿತ್ರದಲ್ಲಿ ನಟ ಶಿವರಾಜ್‌ ಕುಮಾರ್‌

Published 13 ಅಕ್ಟೋಬರ್ 2023, 10:39 IST
Last Updated 13 ಅಕ್ಟೋಬರ್ 2023, 10:39 IST
ಅಕ್ಷರ ಗಾತ್ರ

ಮುಂಬೈ: ಡಾ. ರಾಜ್‌ ಕುಮಾರ್‌ ನಟನೆಯ ಮೊದಲ ಸಿನಿಮಾ ‘ಬೇಡರ ಕಣ್ಣಪ್ಪ’, ತೆಲುಗಿನಲ್ಲಿ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಹೆಸರಿನಲ್ಲಿ ರೀಮೇಕ್‌ ಆಗುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್‌ಕುಮಾರ್‌ ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಹೇಳಿದೆ.

ಎವಿಎ ಎಂಟರ್‌ಟೈನ್‌ಮೆಂಟ್‌ (AVA Entertainment) ಬ್ಯಾನರ್‌ನಲ್ಲಿ ತಯಾರಾಗುತ್ತಿರುವ ಸಿನಿಮಾದಲ್ಲಿ ವಿಷ್ಣು ಮಂಚು ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮುಕೇಶ್‍ ಕುಮಾರ್ ‍ಸಿಂಗ್‍ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಈ ಬಗ್ಗೆ ಎಕ್ಸ್‌ (ಟ್ವಿಟರ್‌)ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಟ ವಿಷ್ಣು ಹಾಗೂ ಪ್ರೊಡಕ್ಷನ್‌ ತಂಡವು ಮಾಹಿತಿ ಹಂಚಿಕೊಂಡಿದೆ.

ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‍ ಮತ್ತು ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಮೋಹನ್‍ ಲಾಲ್‍, ಈ ಚಿತ್ರದಲ್ಲಿ ನಟಿಸುತ್ತಿರುವುದು ಈಗಾಗಲೇ ಸುದ್ದಿಯಾಗಿದೆ. 

ಈಗ ಚಿತ್ರದಲ್ಲಿ ಶಿವರಾಜ್‍ಕುಮಾರ್ ಅವರು ಒಂದು ಮುಖ್ಯ ಪಾತ್ರದಲ್ಲಿಯೇ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಚಿತ್ರತಂಡ, ಅವರ ಪಾತ್ರವೇನು ಎನ್ನುವ ಬಗ್ಗೆ ಬಹಿರಂಗಪಡಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT