ದೃಶ್ಯ – 2 | ಚಿತ್ರಮಂದಿರಕ್ಕೆ ‘ರಾಜೇಂದ್ರ ಪೊನ್ನಪ್ಪ’ ಪ್ರವೇಶ

‘ದೃಶ್ಯ’ದ ನಾಯಕ ‘ರಾಜೇಂದ್ರ ಪೊನ್ನಪ್ಪ’ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ದೃಶ್ಯ – 2ನ ಮೂಲಕ ಡಿ. 10ರಂದು ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದ್ದಾರೆ.
ಚಿತ್ರಕ್ಕೆ ಪಿ.ವಾಸು ಅವರ ನಿರ್ದೇಶನವಿದೆ. ಹಿರಿಯ ನಟ ಅನಂತನಾಗ್, ನವ್ಯ ನಾಯರ್, ಪ್ರಭು ಶಿವಾಜಿ, ಸಾಧುಕೋಕಿಲ, ನೀತು ರೈ, ಪ್ರಮೋದ್ ಶೆಟ್ಟಿ, ಅಶೋಕ್, ಶಿವರಾಂ, ಉನ್ನತಿ, ಕೃಷ್ಣ ಯಟರ್ನ್, ನಾರಾಯಣ್ ಸ್ವಾಮಿ, ಲಾಸ್ಯ ನಾಗರಾಜ್, ಯತಿರಾಜ್ ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.
ಇ4 ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರ ಝೀ ಸ್ಟುಡಿಯೊ ಮೂಲಕ ಬಿಡುಗಡೆಯಾಗುತ್ತಿದೆ. ಸಿ.ವಿ.ಸಾರಥಿ ಕಾರ್ಯಕಾರಿ ನಿರ್ಮಾಪಕ. ಚಿತ್ರಕ್ಕೆ ಜೀತು ಜೋಸೆಫ್ ಕಥೆ ಬರೆದಿದ್ದಾರೆ.
ಜಿ.ಎಸ್.ವಿ ಸೀತಾರಾಂ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ರವಿ ಸಂತೆಹುಕ್ಲು ಅವರ ಕಲಾ ನಿರ್ದೇಶನವಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.