ಶನಿವಾರ, ಸೆಪ್ಟೆಂಬರ್ 26, 2020
26 °C

ಡ್ರಗ್ಸ್ ದಂಧೆ ಪ್ರಕರಣ: ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Ragini Dwivedi

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. 

ನೋಟಿಸ್ ನೀಡಿರುವ ಅಧಿಕಾರಿಗಳು, ಗುರುವಾರ ಬೆಳಿಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗುವಂತೆ ತಿಳಿಸಿದ್ದಾರೆ.

ಡ್ರಗ್ಸ್ ದಂಧೆ ಸಂಬಂಧ ಇಂದ್ರಜಿತ್ ಲಂಕೇಶ್ ಸಿಸಿಬಿ ಅಧಿಕಾರಿಗಳ ಜೊತೆಗೆ  ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಇದರ ಅನ್ವಯ ರಾಗಿಣಿ ಆಪ್ತರೊಬ್ಬರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಅವರು ನೀಡಿರುವ ಮಾಹಿತಿ ಮೇರೆಗೆ ರಾಗಿಣಿ ಅವರಿಗೆ ನೋಟಿಸ್ ನೀಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್, ‘ಡ್ರಗ್ಸ್ ವಿಚಾರ ಸಂಬಂಧ ಮಾಹಿತಿ ಪಡೆಯಲು ರಾಗಿಣಿಗೆ ನೋಟಿಸ್ ನೀಡಲಾಗಿದೆ. ಸಿಸಿಬಿ ಕಚೇರಿಗೆ ಗುರುವಾರ ಬರಲಿದ್ದು, ಬಳಿಕ ತನಿಖೆ ಮುಂದುವರಿಯಲಿದೆ' ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು