ಬುಧವಾರ, ಏಪ್ರಿಲ್ 14, 2021
23 °C

ಡ್ರಗ್ಸ್ ಮಾಫಿಯಾ: ನಿರ್ಮಾಪಕ ಶಂಕರಗೌಡ ಮನೆ ಮೇಲೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್ ಮಾರಾಟ ಪ್ರಕರಣ ಸಂಬಂಧ ಬಿಗ್‌ಬಾಸ್‌ ರಿಯಾಲಿಟಿ ಶೋ ಸ್ಪರ್ಧಿ ಮಸ್ತಾನ್ ಚಂದ್ರ ಮನೆ ಮೇಲೆ ಇತ್ತೀಚೆಗಷ್ಟೇ ದಾಳಿ ಮಾಡಿದ್ದ ಪೂರ್ವ ವಿಭಾಗದ ಪೊಲೀಸರು, ಸಿನಿಮಾ ನಿರ್ಮಾಪಕ ಶಂಕರಗೌಡ ಮನೆ ಮೇಲೂ ಸೋಮವಾರ ಸಂಜೆ ದಾಳಿ ಮಾಡಿದ್ದಾರೆ.

ಪ್ರಕರಣ ಸಂಬಂಧ ನೈಜೀರಿಯಾ ಪ್ರಜೆಗಳು ಸೇರಿ ಹಲವರನ್ನು ಬಂಧಿಸಿದ್ದ ಪೊಲೀಸರು, ಅವರಿಂದ ₹ 4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದರು. ಆರೋಪಿಗಳು ನೀಡಿದ್ದ ಮಾಹಿತಿ ಆಧರಿಸಿ ಮಸ್ತಾನ್ ಮನೆ ಮೇಲೂ ದಾಳಿದ್ದರು. ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ಶಂಕರಗೌಡ ಹೆಸರು ಸಹ ಕೇಳಿಬಂದಿದೆ.

‘ಗೋವಿಂದಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲಯದ ವಾರೆಂಟ್ ಪಡೆದು ನಿರ್ಮಾಪಕ ಶಂಕರಗೌಡ ಮನೆ ಮೇಲೆ ದಾಳಿ ಮಾಡಲಾಗಿದೆ. ಮನೆಯಲ್ಲಿ ಶೋಧ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಶಂಕರಗೌಡ, ಕೆಂಪೇಗೌಡ ಸೇರಿದಂತೆ ಹಲವು ಸಿನಿಮಾ ನಿರ್ಮಾಣ ಮಾಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು