ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್‌ ಪ್ರಕರಣ: ಡ್ಯಾನ್ಸರ್ ಕಿಶೋರ್ ಶೆಟ್ಟಿ ಸೇರಿ ಇಬ್ಬರ ಬಂಧನ

ಮುಂಬೈ, ಬೆಂಗಳೂರಿನಿಂದ ಡ್ರಗ್ಸ್ ಖರೀದಿಸಿ, ಮಂಗಳೂರಿನಲ್ಲಿ ಮಾರಾಟ
Last Updated 19 ಸೆಪ್ಟೆಂಬರ್ 2020, 8:52 IST
ಅಕ್ಷರ ಗಾತ್ರ
ADVERTISEMENT
""

ಮಂಗಳೂರು: ಡ್ರಗ್ಸ್‌ ಸಾಗಣೆ ಮಾಡುತ್ತಿದ್ದ ಡ್ಯಾನ್ಸರ್ ಕಿಶೋರ್‌ ಶೆಟ್ಟಿ ಸೇರಿದಂತೆ ಇಬ್ಬರು‌ ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.

ಮಂಗಳೂರು ಸುರತ್ಕಲ್ ಕಾನ ನಿವಾಸಿ ಅಕೀಲ್ ನೌಶೀಲ್ (28), ಕುಳಾಯಿ ನಿವಾಸಿ ಕಿಶೋರ್ ಅಮನ್ ಶೆಟ್ಟಿ(30) ಬಂಧಿತ ಆರೋಪಿಗಳು. ಇಬ್ಬರನ್ನು ಆರೋಪಿಗಳನ್ನು ನಗರದ ಕದ್ರಿ ಪದವು ಪರಿಸರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಇನ್ನು ಕೆಲ ಆರೋಪಿಗಳಿದ್ದಾರೆ. ಇವರ ಚೈನ್ ಲಿಂಕ್ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ. ಈ ಆರೋಪಿಗಳು ಮುಂಬೈಯಿಂದ ವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಇಬ್ಬರ ಮೇಲೆ ಸೇವನೆ ಮತ್ತು ಮಾರಾಟ ಎರಡು ಪ್ರಕರಣ ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.

ಆರೋಪಿ ಅಕೀಲ್ ನೌಶೀಲ್ ಈ ಹಿಂದೆ ವಿದೇಶದಲ್ಲಿ ಸೇಫ್ಟಿ ಆಫೀಸರ್ ಆಗಿದ್ದು, ಒಂದು ವರ್ಷದ ಹಿಂದೆ ಊರಿಗೆ ಹಿಂತಿರುಗಿದ್ದ. ಕಿಶೋರ್ ಅಮನ್ ಶೆಟ್ಟಿ ಡ್ಯಾನ್ಸರ್, ಕೋರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ. ಅಲ್ಲದೇ, ಅಕೀಲ್‌ ನೌಶೀಲ್‌‌ ಜೊತೆ ಸೇರಿ ಮಾದಕ ವಸ್ತು ಖರೀದಿಸಿ ಮಾರಾಟ ಮಾಡುತ್ತಿದ್ದ. ಈ ಆರೋಪಿಗಳು ಬೆಂಗಳೂರು, ಮುಂಬೈಯಿಂದ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತಿದ್ದರು ಎಂದು ನಗರದ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಮಾಹಿತಿ ನೀಡಿದ್ದಾರೆ.

ಶನಿವಾರ ಮುಂಜಾನೆ ಮಂಗಳೂರು ಸಿಸಿಬಿ ಪೋಲಿಸರು, ಇಕಾನಾಮಿಕ್ ಆಂಡ್ ನಾರ್ಕೋಟಿಕ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಮಾದಕ ವಸ್ತು ಎಂಡಿಎಂಎ ಪೌಡರ್‌‌ ಸೇರಿದಂತೆ ಬೈಕ್, 2 ಮೊಬೈಲ್ ಫೋನ್ ಸೇರಿದಂತೆ ₹1 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಿಶೋರ್‌ ಶೆಟ್ಟಿ ಬಹಳ ಹುಡುಗಿಯರಿಗೆ ಡ್ರಗ್ಸ್ ನೀಡಿ ಪಾರ್ಟಿ ಮಾಡುತ್ತಿದ್ದ ಎನ್ನಲಾಗಿದ್ದು, ಬೆಂಗಳೂರಿನ ಪ್ರಖ್ಯಾತ ಆ್ಯಂಕರ್ ಕಂ ನಟಿ ಜೊತೆ ಕೂಡ ಪಾರ್ಟಿ ಮಾಡುತ್ತಿದ್ದ ಎಂದು ಹೇಳಲಾಗಿದೆ. ಹಾಗೆಯೇ ಇತ್ತೀಚೆಗಷ್ಟೆ ಮಂಗಳೂರಿನಲ್ಲಿ ಒಂದು ಡ್ರಗ್ ಪಾರ್ಟಿಯಲ್ಲಿ ಆ ನಟಿ ಕಂ ಆಂಕರ್ ಭಾಗವಹಿಸಿದ್ದರು ಎನ್ನಲಾಗಿದೆ. ಅಲ್ಲದೇ ಯುವತಿಯರನ್ನು ಸೇರಿಸಿ ಅವರಿಗೆ ತಂಡ ಡ್ರಗ್ಸ್‌ ನೀಡುತ್ತಿತ್ತು ಎಂದು ಹೇಳಲಾಗುತ್ತಿದೆ.

ಸ್ಯಾಂಡಲ್‌ವುಡ್, ಬಾಲಿವುಟ್ ಜೊತೆಗೆ ನಂಟಿರುವ ಕಿಶೋರ್ ಶೆಟ್ಟಿಯ ಪ್ರಾಥಮಿಕ ವಿಚಾರದಲ್ಲಿ ಹಲವರ ಹೆಸರನ್ನು ಹೇಳಿದ್ದು, ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿಗಳಿಂದ ವಶಪಡಿಸಿಕೊಂಡಿರುವ ಡ್ರಗ್ಸ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT