ಮಂಗಳವಾರ, ನವೆಂಬರ್ 30, 2021
21 °C

ಡ್ರಗ್ಸ್ ಪ್ರಕರಣ: ‌ದಿಗಂತ್-ಐಂದ್ರಿತಾ ವಿಚಾರಣೆ ಮುಕ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣ ಸಂಬಂಧ ಸಿಸಿಬಿ ಕಚೇರಿಯಲ್ಲಿ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಅವರ ವಿಚಾರಣೆ ಮುಗಿದಿದ್ದು, ಅಗತ್ಯವಿದ್ದರೆ ವಿಚಾರಣೆಗೆ ಮತ್ತೆ ಕರೆಯುವುದಾಗಿ ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಇಬ್ಬರೂ ಹಾಜರಾಗಿದ್ದರು. ಸಿಸಿಬಿ ಅಧಿಕಾರಿಗಳು ಇಬ್ಬರಿಗೂ ಪ್ರತ್ಯೇಕವಾಗಿ ವಿಚಾರಣೆ ನಡೆಸಿದರು. ಸತತ ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಯಿತು.

ವಿಚಾರಣೆ ಮುಗಿಸಿ ಬಳಿಕ ಮಾತನಾಡಿದ ನಟ ದಿಗಂತ್, ‘ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದೇವೆ. ಬೇರೆ ಮಾಹಿತಿ ಬಹಿರಂಗಪಡಿಸದಂತೆ ಸಿಸಿಬಿ ಅಧಿಕಾರಿಗಳು ಸೂಚಿಸಿದ್ದಾರೆ. ತನಿಖೆ ನಾವು ಸಹಕಾರ ನೀಡುತ್ತೇವೆ. ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗುತ್ತೇವೆ’ ಎಂದಿದ್ದಾರೆ.

‘ಒಂದು ಹಂತದ ವಿಚಾರಣೆ ಮುಗಿದಿದೆ. ಅಗತ್ಯ ಬಿದ್ದರೆ ಮತ್ತೊಂದು ದಿನ ವಿಚಾರಣೆಗೆ ಕರೆಯಲಿದ್ದೇವೆ’ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ಇದನ್ನೂ ಓದಿ... ಡ್ರಗ್ಸ್‌ ಪ್ರಕರಣ| ನಟ ದಿಗಂತ್, ನಟಿ ಐಂದ್ರಿತಾಗೆ ಸಿಸಿಬಿಯಿಂದ ನೋಟಿಸ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು