ಮಂಗಳವಾರ, ಮಾರ್ಚ್ 28, 2023
30 °C

ನಟಿ ಸಂಜನಾ ಮನೆ ಮೇಲೆ ಸಿಸಿಬಿ ದಾಳಿ: ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. 

ಇಂದಿರಾನಗರದಲ್ಲಿರುವ ನಟಿ ಸಂಜನಾ ಫ್ಲ್ಯಾಟ್‌ಗೆ ದಾಳಿ ನಡೆಸಿದ ಅಧಿಕಾರಿಗಳು ಮೊಬೈಲ್ ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದರು. ದಾಳಿ ಬಳಿಕ ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು, ಕಚೇರಿಗೆ ಕರೆದೊಯ್ದಿದ್ದಾರೆ.

ನ್ಯಾಯಾಲಯದ ಅನುಮತಿ ಪಡೆದು ಸಂಜನಾ ಮನೆ ಮೇಲೆ ದಾಳಿ ಮಾಡಲಾಗಿದೆ ಎಂಬುದಾಗಿ ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ಸಂಜನಾ ಅವರ ಬಿಎಂಡಬ್ಲ್ಯು ಕಾರನ್ನು ಪೊಲೀಸರು ಪರಿಶೀಲಿಸಿದ್ದಾರೆ. ಕಾರು ಅರ್ಚನಾ ಗಲ್ರಾನಿ ಎಂಬ ಹೆಸರಲ್ಲಿ ನೋಂದಣಿ ಆಗಿದ್ದು, ಸಂಜನಾ ಅವರಿಗೆ ಎರಡು ಹೆಸರಿದೆಯೇ? ಅಥವಾ ಅರ್ಚನಾ ಯಾರು ಎಂಬುದರ ಬಗ್ಗೆ ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ಸಂಬರಗಿಯನ್ನು ಸುಮ್ಮನೇ ಬಿಡಲ್ಲ: ಸಂಜನಾ ಆಕ್ರೋಶ  

ಡ್ರಗ್ಸ್ ಜಾಲ ಪ್ರಕರಣದಡಿ ಈಗಾಗಲೇ ಬಂಧಿಸಿರುವ ಆರೋಪಿ ವಿರೇನ್ ಖನ್ನಾ  ವಿರೇನ್ ಖನ್ನಾ ಮನೆ ಮೇಲೆಯೂ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದೆಹಲಿ ಮತ್ತು ಬೆಂಗಳೂರಿನಲ್ಲಿರುವ ವಿರೇನ್ ಮನೆಗೆ ಸಿಸಿಬಿ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು