ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಪ್ರಕರಣ: ‘ಕೆಂಪೇಗೌಡ’ ನಿರ್ಮಾಪಕ ಬಂಧನ

Last Updated 23 ಮಾರ್ಚ್ 2021, 20:11 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ಸಿನಿಮಾ ನಿರ್ಮಾಪಕ ಶಂಕರಗೌಡ ಅವರನ್ನು ಗೋವಿಂದಪುರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆಗಳು ಸೇರಿ ಹಲವರನ್ನು ಇತ್ತೀಚೆಗಷ್ಟೇ ಬಂಧಿಸಿದ್ದ ಪೊಲೀಸರು, ₹ 4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದರು. ಆರೋಪಿಗಳು ನೀಡಿದ್ದ ಮಾಹಿತಿ ಆಧರಿಸಿ ಬಿಗ್‌ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಮಸ್ತಾನ್ ಚಂದ್ರ ಅವರ ಮನೆ ಹಾಗೂ ನಿರ್ಮಾಪಕ ಶಂಕರಗೌಡ ಕಚೇರಿ ಮೇಲೆ ದಾಳಿ ಮಾಡಿದ್ದರು.

ಪ್ರಕರಣ ಸಂಬಂಧ ಶಂಕರಗೌಡ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸಿದ್ದರು. ಇದೀಗ ಸೂಕ್ತ ಪುರಾವೆಗಳು ಲಭ್ಯವಾಗಿದ್ದರಿಂದ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಿದ್ದಾರೆ.

‘ಕೆಂಪೇಗೌಡ ಸೇರಿದಂತೆ ಹಲವು ಸಿನಿಮಾ ನಿರ್ಮಾಣ ಮಾಡಿದ್ದ ಶಂಕರಗೌಡ, ತಮ್ಮದೇ ಕಚೇರಿ ಹಾಗೂ ಇತರೆಡೆ ಪಾರ್ಟಿ
ಗಳನ್ನು ಆಯೋಜಿಸಿ, ಅಲ್ಲಿಗೆ ಬರುತ್ತಿದ್ದ ಅತಿಥಿಗಳಿಗೆ ಡ್ರಗ್ಸ್ ಕೊಡುತ್ತಿದ್ದರು. ಡ್ರಗ್ಸ್ ಖರೀದಿಸಲು ಹಣವನ್ನೂ ನೀಡುತ್ತಿದ್ದರು ಎಂಬುದು ಗೊತ್ತಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಕಚೇರಿ ಸಿಬ್ಬಂದಿ ಹೇಳಿಕೆ ದಾಖಲು: ಪ್ರಕರಣದಲ್ಲಿ ಶಂಕರೇಗೌಡ ಅವರ ಕಚೇರಿಯ ವ್ಯವಸ್ಥಾಪಕ ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಿದ್ದ ಪೊಲೀಸರು, ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದರು.

ಶಂಕರಗೌಡ ಅವರೇ ಡ್ರಗ್ಸ್ ಸೇವನೆ ಮಾಡುತ್ತಿದ್ದ ಅನುಮಾನ ಪೊಲೀಸರಿಗೆ ಇದೆ. ಶಂಕರಗೌಡ ಅವರನ್ನು ವೈದ್ಯಕೀಯ ಪರೀಕ್ಚೆಗೆ ಒಳಪಡಿಸಲಾಗಿದ್ದು, ಅದರ ವರದಿ ಬರುವುದು ಬಾಕಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT