ಹೈದರಾಬಾದ್: 2017ರಲ್ಲಿ ಸಾಕಷ್ಟು ಸದ್ದು ಮಾಡಿದ್ದ ಟಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ನಟ–ನಟಿಯರಿಗೆ ಸಂಕಷ್ಟ ಎದುರಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಾಂತರ ರೂಪಾಯಿ ಹಣಕಾಸು ವಹಿವಾಟು ನಡೆದಿದೆ ಎಂದು ಆರೋಪಿಸಿ ಪುರಿ ಜಗನ್ನಾಥ್ ಒಳಗೊಂಡಂತೆ 12 ನಟ–ನಟಿಯರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಪುರಿ ಅವರನ್ನು ಹೈದರಾಬಾದ್‌ನ ಇಡಿ ಕಚೇರಿಯಲ್ಲಿ ಅಧಿಕಾರಿಗಳು ಸುಮಾರು 10 ಗಂಟೆ ವಿಚಾರಣೆ ನಡೆಸಿದರು.
ಈ ವೇಳೆ ಪುರಿ ಅವರು ಲೆಕ್ಕ ಪರಿಶೋಧಕರ ಜೊತೆ ಆಗಮಿಸಿ 2015 ರಿಂದ 2021 ರವರೆಗಿನ ತಮ್ಮ ಬ್ಯಾಂಕ್ ವಹಿವಾಟಿನ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
2017 ರಲ್ಲಿ ವ್ಯಾಪಕ ಸದ್ದು ಮಾಡಿದ್ದ ಈ ಡ್ರಗ್ಸ್ ಪ್ರಕರಣದ ಬಗ್ಗೆ ತೆಲಂಗಾಣ ಸರ್ಕಾರ ಎಸ್‌ಐಟಿ ರಚಿಸಿತ್ತು. ವಿಚಾರಣೆ ಇನ್ನೂ ನಡೆಯುತ್ತಿದ್ದು, ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಇಡಿ ಮಧ್ಯ ಪ್ರವೇಶಿಸಿದೆ.
ನಟರಾದ ರವಿತೇಜ, ರಾಣಾ ದಗ್ಗೂಬಾಟಿ, ಮುಮೈತ್ ಖಾನ್, ಚಾರ್ಮಿ ಕೌರ್ ಸೆ.22 ರೊಳಗೆ ಇಡಿ ವಿಚಾರಣೆಗೆ ಹಾಜರಾಗಬೇಕಿದೆ. ಇತ್ತ ಕನ್ನಡ ಚಿತ್ರರಂಗ ಹಾಗೂ ಬಾಲಿವುಡ್‌ನಲ್ಲೂ ಡ್ರಗ್ಸ್ ವಿಚಾರ ಜೋರಾಗಿ ನಡೆಯುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.