2014ರಲ್ಲಿ ತೆರೆಕಂಡು ಅಪಾರ ಮೆಚ್ಚುಗೆ ಪಡೆದುಕೊಂಡಿದ್ದ ಚಿತ್ರ ಪಿ.ವಾಸು ನಿರ್ದೇಶನದ ‘ದೃಶ್ಯ’. ಮಲಯಾಳಂನಲ್ಲಿ ನಟ ಮೋಹನ್‌ಲಾಲ್ ನಟಿಸಿದ್ದ ‘ದೃಶ್ಯಂ’ ಚಿತ್ರದ ರಿಮೇಕ್ ಇದಾಗಿತ್ತು. ಮಲಯಾಳಂನಲ್ಲಿ ಚಿತ್ರದ ಎರಡನೇ ಭಾಗವೂ ಇತ್ತೀಚೆಗೆ ಬಿಡುಗಡೆಯಾಗಿದ್ದು, ಹಿಟ್ ಆಗಿತ್ತು.

ಕನ್ನಡದಲ್ಲೂ ಎರಡನೇ ಭಾಗ ರಿಮೇಕ್ ಆಗುತ್ತಿದ್ದು, ‘ದೃಶ್ಯ–2’ ಶೀರ್ಷಿಕೆಯ ಈ ಚಿತ್ರದ ಮುಹೂರ್ತ ಸಮಾರಂಭ ಯಲಹಂಕದ ಬಳಿಯ ವೈಟ್‌ಹೌಸ್‌ನಲ್ಲಿ ಸೋಮವಾರ ಸರಳವಾಗಿ ನೆರವೇರಿತು. ಚಿತ್ರದ ಚಿತ್ರೀಕರಣವೂ ಆರಂಭವಾಗಿದ್ದು, ಕ್ರೇಜಿಸ್ಟಾರ್ ರವಿಚಂದ್ರನ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ವಿಶೇಷವೆಂದರೆ ಹಿರಿಯ ನಟ ಅನಂತನಾಗ್ ಕೂಡಾ ಚಿತ್ರತಂಡ ಸೇರಿಕೊಂಡಿದ್ದಾರೆ.

ಚಿತ್ರತಂಡ ಸೇರಿಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ನಟ ಅನಂತನಾಗ್, ‘ನಾನು ಕಳೆದ ಒಂದೂವರೆ ವರ್ಷದಿಂದ ಮನೆಬಿಟ್ಟು ಆಚೆ ಬಂದಿಲ್ಲ. ಬಹಳ ದಿನಗಳ ನಂತರ ಚಿತ್ರೀಕರಣಕ್ಕಾಗಿ ಆಚೆ ಬಂದಿರುವುದು ನನಗೆ ಖುಷಿಯಾಗಿದೆ. ಎಲ್ಲರೂ ಲಾಕ್‌ಡೌನ್ ಸಮಯದಲ್ಲಿ ದಪ್ಪ ಆಗುತ್ತಾರೆ. ನಾನು ನಾಲ್ಕು ಕೆ.ಜಿ ಕಡಿಮೆಯಾಗಿದ್ದೇನೆ’ ಎಂದು ನಕ್ಕರು.

‘ನನಗೆ ಕಥೆ ಇಷ್ಟವಾಗಿ, ಕೇವಲ ನಾಲ್ಕೈದು ದಿನಗಳಲ್ಲಿ ಈ ಚಿತ್ರದಲ್ಲಿ ನಾನು ಅಭಿನಯಿಸುವುದು ಖಚಿತವಾಯಿತು.
ಸ್ವಲ್ಪ ಸಮಯದಲ್ಲಿ ಚಿತ್ರತಂಡ ಎಲ್ಲಾ ಸಿದ್ದತೆ ಮಾಡಿಕೊಂಡಿರುವುದು ಸಂತಸದ ವಿಷಯ. ಪಿ.ವಾಸು ಅವರ ನಿರ್ದೇಶನದಲ್ಲಿ ನಾನು ನಟಿಸುತ್ತಿರುವ ಎರಡನೇ ಚಿತ್ರವಿದು’ ಎನ್ನುತ್ತಾರೆ ಅನಂತನಾಗ್.

‘ದೃಶ್ಯ’ ಮೊದಲ ಭಾಗದಲ್ಲಿ ನಾಯಕಿಯಾಗಿ ನಟಿಸಿದ್ದ ನವ್ಯ ನಾಯರ್ ಈ ಚಿತ್ರದಲ್ಲೂ ನಾಯಕಿಯಾಗಿ ನಟಿಸುತ್ತಿದ್ದಾರೆ. ರವಿಚಂದ್ರನ್ ಅವರ ಪುತ್ರಿ ಪಾತ್ರದಲ್ಲಿ ಆರೋಹಿ ನಾರಾಯಣ್ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಭು ಶಿವಾಜಿ, ಸಾಧುಕೋಕಿಲ, ನೀತು ರೈ, ಪ್ರಮೋದ್ ಶೆಟ್ಟಿ, ಅಶೋಕ್, ಶಿವರಾಂ, ಉನ್ನತಿ, ಕೃಷ್ಣ ಯುಟರ್ನ್, ನಾರಾಯಣ್ ಸ್ವಾಮಿ, ಲಾಸ್ಯ ನಾಗರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇ4 ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸಿ.ವಿ.ಸಾರಥಿ.
ಜೀತು ಜೋಸೆಫ್ ಕಥೆ ಬರೆದಿದ್ದು, ಪಿ.ವಾಸು ನಿರ್ದೇಶನ ಮಾಡುತ್ತಿದ್ದಾರೆ. ಜಿ.ಎಸ್.ವಿ ಸೀತಾರಾಂ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ರವಿ ಸಂತೆಹುಕ್ಲು ಅವರ ಕಲಾ ನಿರ್ದೇಶನ ಹಾಗೂ ಲೋಕೇಶ್ ಬಿಕೆ ಗೌಡ, ಭರತ್ ಅವರ ನಿರ್ಮಾಣ ನಿರ್ವಹಣೆ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.