ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಯಾಳಂ ನಟ ದುಲ್ಕರ್ ಅಭಿನಯದ ‘ಸೀತಾ ರಾಮಂ‘: ನಾಳೆ ಹಿಂದಿಯಲ್ಲಿ ಬಿಡುಗಡೆ

Last Updated 1 ಸೆಪ್ಟೆಂಬರ್ 2022, 11:57 IST
ಅಕ್ಷರ ಗಾತ್ರ

ಮಲಯಾಳಂ ಖ್ಯಾತ ನಟ ದುಲ್ಕರ್ ಸಲ್ಮಾನ್ ಅಭಿನಯದ ‘ಸೀತಾ ರಾಮಂ‘ ಚಿತ್ರ ಬಿಡುಗಡೆಯಾಗಿ ಹಿಟ್‌ ಆಗಿದ್ದು, ಇದೀಗ ಹಿಂದಿ ಅವತರಣಿಕೆಯು ಬಿಡುಗಡೆಗೆ ಸಿದ್ಧವಾಗಿದೆ.

ಗುರುವಾರ ನಟದುಲ್ಕರ್ ಸಲ್ಮಾನ್ ಅವರು ಹಿಂದಿ ಭಾಷೆಯ‘ಸೀತಾ ರಾಮಂ‘ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದಾರೆ. ದೇಶದ ಹಿಂದಿ ಪ್ರದೇಶಗಳಲ್ಲೂ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ನಾಳೆ (ಸೆ.2) ಬಿಡುಗಡೆಯಾಗಲಿದೆ.

ಟಾಲಿವುಡ್ ಪ್ರೊಡಕ್ಷನ್ ಹೌಸ್‌ನ ವೈಜಯಂತಿ ಮೂವೀಸ್‌ನ ಬಹು ನಿರೀಕ್ಷಿತ ರೊಮ್ಯಾಂಟಿಕ್‌ ಹಾಗೂ ಸಾಹಸ ಇರುವ 'ಸೀತಾ ರಾಮಂ' ಚಿತ್ರವನ್ನು ಹನು ರಾಘವಪುಡಿ ನಿರ್ದೇಶನ ಮಾಡಿದ್ದಾರೆ. ದುಲ್ಕರ್ ಸಲ್ಮಾನ್ ಅವರಿಗೆ ಜೋಡಿಯಾಗಿ ಮೃಣಾಲ್ ಠಾಕೂರ್, ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ.

ಸೀತಾ ರಾಮಂ ಚಿತ್ರ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿಆಗಸ್ಟ್ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರಕ್ಕೆ ಪ್ರೇಕ್ಷಕರು ಹಾಗೂ ವಿಮರ್ಶಕರು ಉತ್ತಮ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬಾಕ್ಸ್‌ ಆಫೀಸ್‌ನಲ್ಲೂ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT