ಕನ್ನಡ ಚಿತ್ರರಂಗದ 'ಸಲಗ' ದುನಿಯಾ ವಿಜಯ್ ಇಂದು (ಜನವರಿ 20) 48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಈ ಸಂದರ್ಭದಲ್ಲಿ ಕನ್ನಡ ಹಾಗೂ ತೆಲುಗು ಚಿತ್ರರಂಗದ ಗಣ್ಯರು ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ಅಭಿಮಾನಿಗಳು ಸಹ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದಾರೆ.
ವಿಜಯ್ ನಟಿಸುತ್ತಿರುವ ಮೊದಲ ತೆಲುಗು ಸಿನಿಮಾದ ನಿರ್ದೇಶಕ ಗೋಪಿಚಂದ್ ಮಲಿನೇನಿ ಟ್ವೀಟ್ ಮೂಲಕ ಹುಟ್ಟುಹಬ್ಬದ ಶುಭಾಶಯ ಹೇಳಿದ್ದಾರೆ.
ಕಳೆದ ವರ್ಷ ತೆರೆಕಂಡಿದ್ದ 'ಸಲಗ' ಸಿನಿಮಾ ದುನಿಯಾ ವಿಜಯ್ ವೃತ್ತಿ ಬದುಕಿಗೆ ಹೊಸ ತಿರುವು ನೀಡಿತ್ತು. ಮೊದಲ ನಿರ್ದೇಶನದಲ್ಲೇ ಅವರು ಯಶಸ್ವಿಯಾಗಿದ್ದರು, ಆ ಮೂಲಕ ಚಂದನವನ ಹಾಗೂ ಟಾಲಿವುಡ್ ಗಮನ ಸೆಳೆದಿದ್ದರು.
ದೇಶದಲ್ಲಿ ಕೋವಿಡ್ ಹೆಚ್ಚಳವಾಗಿರುವುದು,ಪುನೀತ್ ರಾಜ್‌ಕುಮಾರ್ ಹಾಗೂ ನನ್ನತಂದೆ, ತಾಯಿ ನಿಧನರಾಗಿರುವ ಹಿನ್ನೆಲೆಯಲ್ಲಿ ಈ ವರ್ಷ ಜನ್ಮದಿನ ಆಚರಿಸಿಕೊಳ್ಳಲಾರೆ ಎಂದು ವಿಜಯ್ ಅಭಿಮಾನಿಗಳಿಗೆ ಹೇಳಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.