ಮಂಗಳವಾರ, ಜನವರಿ 25, 2022
25 °C

ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ವಿರುದ್ಧ ಇ.ಡಿಯಿಂದ ಲುಕ್ ಔಟ್ ನೋಟಿಸ್ ಜಾರಿ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಭಾನುವಾರ ಲುಕ್ ಔಟ್ ನೊಟೀಸ್ ಪ್ರಕಟಿಸಿದ್ದಾರೆ.

ಸದ್ಯ ಮಸ್ಕತ್‌ಗೆ ಪ್ರಯಾಣ ಬೆಳೆಸಿದ್ದ ಜಾಕ್ವೆಲಿನ್‌ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್‌ ಮಾಡಿದೆ.

₹200 ಕೋಟಿ ಹಣ ವಂಚನೆ ಪ್ರಕರಣದಲ್ಲಿ ಶ್ರೀಲಂಕಾ ಮೂಲದ ಜಾಕ್ವೆಲಿನ್‌ ಅವರ ಹೆಸರು ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ಬಾಲಿವುಡ್‌ ನಟಿಯನ್ನು ಹಲವು ಬಾರಿ ಇ.ಡಿ ವಿಚಾರಣೆಗೆ ಒಳಪಡಿಸಿತ್ತು.

ಕಿಚ್ಚ ಸುದೀಪ್‌ ಅಭಿನಯದ ಕನ್ನಡದ ಬಿಗ್‌ಬಜೆಟ್‌ ಚಿತ್ರ ‘ವಿಕ್ರಾಂತ್‌ ರೋಣ’ದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕುವುದರ ಜೊತೆಗೆ ವಿಶೇಷ ಪಾತ್ರದಲ್ಲೂ ಜಾಕ್ವೆಲಿನ್‌ ಕಾಣಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು