ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈದ್‌ ಅಲ್ ಅದಾ: ಮಗನೊಂದಿಗೆ ನಿಂತು ಅಭಿಮಾನಿಗಳತ್ತ ಕೈಬೀಸಿದ ಶಾರುಖ್‌ ಖಾನ್‌

ಅಕ್ಷರ ಗಾತ್ರ

ಮುಂಬೈ: ದೇಶದಾದ್ಯಂತ ಶ್ರದ್ಧೆ ಹಾಗೂ ಭಕ್ತಿಯಿಂದ ಬಕ್ರೀದ್ ಹಬ್ಬವನ್ನು ಮುಸ್ಲಿಮರು ಭಾನುವಾರ ಆಚರಿಸಿದರು.

ಹಬ್ಬದ ಹಿನ್ನೆಲೆಯಲ್ಲಿ ತಮ್ಮ ನಿವಾಸದ ಹೊರಗೆ ಬಂದು ನೆರೆದಿದ್ದ ಅಭಿಮಾನಿಗಳತ್ತ ಬಾಲಿವುಡ್‌ ನಟ ಶಾರುಖ್‌ ಕೈಬೀಸಿದ್ದಾರೆ.

ಕಿಂಗ್ ಖಾನ್‌ ಕೊನೆಯ ಪುತ್ರ ಅಬ್ರಾಮ್‌ ಖಾನ್ ಶಾರುಖ್‌ ಜೊತೆ ಕಾಣಿಸಿಕೊಂಡಿದ್ದು, ಅಪ್ಪನ ಅಭಿಮಾನಿಗಳತ್ತ ಕೈಬೀಸಿದ್ದಾರೆ.

ಇದಕ್ಕೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರು ಶಾರುಖ್‌ಗೆ ಶುಭಾಶಯ ಕೋರಿದ್ದಾರೆ.

ಸದ್ಯ ಶಾರುಖ್ ನಟನೆಯ ಪಠಾಣ್ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರವನ್ನು ಯಶ್ ರಾಜ್ ಸಂಸ್ಥೆ ನಿರ್ಮಿಸಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ 25, 2023 ರಂದು ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಬಾಲಿವುಡ್‌ನ ಬಾದ್‌ಶಾ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ಶಾರುಖ್‌ಕಳೆದ 3 ದಶಕಗಳಿಂದ ಬಾಲಿವುಡ್‌ ಸಿನಿರಂಗದಲ್ಲಿ ಸ್ಟಾರ್ ನಟರ ‍ಪಟ್ಟಿಯಲ್ಲಿದ್ದಾರೆ. ಅನೇಕ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡಿರುವ ಕಿಂಗ್ ಖಾನ್‌ ರೊಮ್ಯಾಂಟಿಕ್ ಚಿತ್ರಗಳಿಂದಲೂ ಹೆಸರು ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT