ಬೆಂಗಳೂರು: ‘ಏಕ್ ಲವ್ ಯಾ’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘ಏಕ್ ಲವ್ ಯಾ’ ಸಿನಿಮಾವನ್ನು ಪ್ರೇಮ್ ನಿರ್ದೇಶನ ಮಾಡಿದ್ದಾರೆ. ಖ್ಯಾತ ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣ ನಾಯಕರಾಗಿದ್ದಾರೆ. ಈ ಚಿತ್ರದಲ್ಲಿ ರಚಿತಾ ರಾಮ್ ಬೋಲ್ಡ್ ಆಗಿ ಕಾಣಿಸಿಕೊಂಡಿರುವುದು ವಿಶೇಷ.

ಪ್ರೇಮಿಗಳ ದಿನವಾದ ಇಂದು ಟೀಸರ್ ಅನ್ನುಯುಟ್ಯೂಬ್ಗೆ ಸೇರಿಸಲಾಗಿದೆ. ಬಿಡುಗಡೆಯಾದ1 ಗಂಟೆಯಲ್ಲೇ ಸುಮಾರು 37 ಸಾವಿರಕ್ಕೂ ಹೆಚ್ಚು ಜನರು ಟೀಸರ್ ವೀಕ್ಷಣೆ ಮಾಡಿದ್ದಾರೆ.

ರಚಿತಾ ರಾಮ್ ಸಿಗರೇಟ್ ಸೇದುವ ದೃಶ್ಯದ ಮೂಲಕ ಟೀಸರ್ ಆರಂಭವಾಗುತ್ತದೆ. ನಾಯಕ ರಾಣಗೆ ರಚಿತಾ ಲಿಪ್ ಕಿಸ್ ಮಾಡುವ ದೃಶ್ಯದೊಂದಿಗೆ ಟೀಸರ್ ಕೊನೆಯಾಗುತ್ತದೆ. 1 ನಿಮಿಷ 40 ಸೆಕೆಂಡ್ಗಳ ಟೀಸರ್ನಲ್ಲಿ ರಾಣನ ಆ್ಯಕ್ಷನ್ ದೃಶ್ಯಗಳು ಮಾಸ್ ಪ್ರೇಕ್ಷಕರಿಗೆ ಹೆಚ್ಚು ಆಪ್ತವಾಗುತ್ತವೆ.

‘ವಿಲನ್’ ಗುಂಗಿನಿಂದ ಹೊರಬಂದಿರುವ ಪ್ರೇಮ್ ಈಗ ‘ಏಕ್ ಲವ್ ಯಾ’ ಎಂದು ಹೇಳುತ್ತಿದ್ದಾರೆ. ಇತ್ತೀಚೆಗೆ ಚಿತ್ರದ ಫಸ್ಟ್ಲುಕ್ ಬಿಡುಗಡೆಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಸದ್ದು ಮಾಡಿತ್ತು.

ಅರ್ಜುನ್ ಜನ್ಯಾಏಕ್ ಲವ್ ಯಾ ಗೆಸಂಗೀತ ಸಂಯೋಜನೆ ಮಾಡಿದ್ದಾರೆ.

ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರಿಗೆಟೀಸರ್ನಲ್ಲಿ ಗೌರವ ಅರ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.