‘ರತ್ನನ್ ಪ್ರಪಂಚ’ ಖ್ಯಾತಿಯ ರೋಹಿತ್ ಪದಕಿ ನಿರ್ದೇಶನದ, ಯುವ ರಾಜ್ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಜುಲೈ 18 ರಂದು ತೆರೆಕಾಣಲಿದ್ದು, ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ.

‘ಬ್ಯಾಂಗಲ್ ಬಂಗಾರಿ’ ಹಾಡಿನಲ್ಲಿ ನಟ ಯುವ ರಾಜ್ಕುಮಾರ್ ಹಾಗೂ ನಟಿ ಸಂಜನಾ ಆನಂದ್ ಹೆಜ್ಜೆ ಹಾಕಿದ್ದಾರೆ. ತನ್ನ ಇಷ್ಟದ ಹುಡುಗಿಯನ್ನು ‘ಬ್ಯಾಂಗಲ್ ಬಂಗಾರಿ’ಯೆಂದು ಕರೆಯುತ್ತಾ ನಾಯಕ ಕುಣಿದು ಕುಪ್ಪಳಿಸಿರುವ ಹಾಡು ಇದಾಗಿದೆ. ಹಾಡಿಗೆ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದು, ಮುರಳಿ ಮಾಸ್ಟರ್ ಅವರ ನೃತ್ಯ ಸಂಯೋಜನೆ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ನೀಡಿರುವ ಹಾಡಿಗೆ ಅಂತೋನಿ ದಾಸನ್ ದನಿಯಾಗಿದ್ದಾರೆ. ಈಗಾಗಲೇ ಟೈಟಲ್ ಟ್ರ್ಯಾಕ್ ಹಾಗೂ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರದಲ್ಲಿ ಯುವ ರಾಜ್ಕುಮಾರ್ ರಗಡ್ ಪಾತ್ರದಲ್ಲಿದ್ದಾರೆ. ಬೆಂಗಳೂರು ಭೂಗತ ಜಗತ್ತಿನ ಕಥೆಯನ್ನು ಹೊಂದಿರುವ ಈ ಸಿನಿಮಾದಲ್ಲಿ ಸಂಪದ ಹಾಗೂ ‘ಸಲಗ’ ಸಿನಿಮಾ ಖ್ಯಾತಿಯ ಸಂಜನಾ ಆನಂದ್ ನಾಯಕಿಯರಾಗಿ ನಟಿಸಿದ್ದಾರೆ. ಪಿಆರ್ಕೆ ಪ್ರೊಡಕ್ಷನ್ಸ್, ಕೆಆರ್ಜಿ ಸ್ಟುಡಿಯೊಸ್ ಹಾಗೂ ಜಯಣ್ಣ ಕಂಬೈನ್ಸ್ ಬ್ಯಾನರ್ಗಳ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯ ಸೇರಿದಂತೆ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.