ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರ ಸೆ.5ರಂದು ತೆರೆಗೆ ಬರಲಿದೆ. ವಿಭಿನ್ನ ಪ್ರೇಮ ಕಥೆಯನ್ನು ಹೊಂದಿರುವ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಚಿತ್ರ ತೆರೆ ಕಾಣಲಿದೆ.

‘ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಲ್ಲಿ ನಟಿ ರಕ್ಷಿತಾ ಸಹೋದರ ರಾಣಾ ಕನ್ನಡದ ಹುಡುಗ ‘ಹರೀಶ್’ ಆಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಜನಪ್ರಿಯ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ತಾರಾಬಳಗದಲ್ಲಿದ್ದಾರೆ’ ಎಂದಿದೆ ಚಿತ್ರತಂಡ.

‘ನೈಜ ಘಟನೆಯನ್ನು ಆಧರಿಸಿದ ಚಿತ್ರ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿದೆ. ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ’ ಎಂದಿದ್ದಾರೆ ನಿರ್ದೇಶಕರು.

ಡಿ.ಇಮ್ಮನ್ ಸಂಗೀತ, ಅದ್ವೈತ್ ಗುರುಮೂರ್ತಿ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ನಾಗಾರ್ಜುನ್ ಶರ್ಮಾ ಹಾಗೂ ಪುನೀತ್ ರಂಗಸ್ವಾಮಿ ಸಂಭಾಷಣೆ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.