ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಮರ್ಜೆನ್ಸಿ’ ಇದೇ ಜೂನ್‌ 14ಕ್ಕೆ ಬಿಡುಗಡೆ: ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ

Published 23 ಜನವರಿ 2024, 6:03 IST
Last Updated 23 ಜನವರಿ 2024, 6:03 IST
ಅಕ್ಷರ ಗಾತ್ರ

ಮುಂಬೈ: ನಟಿ ಕಂಗನಾ ರನೌತ್ ಅಭಿನಯದ ‘ಎಮರ್ಜೆನ್ಸಿ’ಚಿತ್ರ ಇದೇ ಜೂನ್ 14ರಂದು ತೆರೆಗೆ ಅಪ್ಪಳಿಸಲಿದೆ ಎಂದು ಚಿತ್ರತಂಡ ಮಂಗಳವಾರ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ಕಂಗನಾ ಬೆಳ್ಳಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಮಣಿಕರ್ಣಿಕಾ ಫಿಲಂಸ್ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಿಸುತ್ತಿದೆ.

‘ಎಮರ್ಜೆನ್ಸಿ’ ಬಹು ನಿರೀಕ್ಷಿತ ಚಿತ್ರವಾಗಿದ್ದು, ಚಿತ್ರತಂಡದಲ್ಲಿ ಭಾರತೀಯ ಹಾಗೂ ಅಂತರರಾಷ್ಟ್ರೀಯ ಪ್ರತಿಭೆಗಳಿದ್ದಾರೆ ಎಂದು ಮಣಿಕರ್ಣಿಕಾ ಫಿಲಂಸ್ ನಿರ್ಮಾಣ ಸಂಸ್ಥೆ ಹೇಳಿದೆ.

ಈ ಚಿತ್ರವು 2023ರ ನವೆಂಬರ್‌ನಲ್ಲಿಯೇ ಬಿಡುಗಡೆಯಾಬೇಕಿತ್ತು, ಆದರೆ ಕಂಗನಾ ಅವರ ವೇಳಾಪಟ್ಟಿಯಲ್ಲಿ ಆದ ಬದಲಾವಣೆಗಳಿಂದಾಗಿ ಚಿತ್ರ ಬಿಡುಗಡೆಗೊಳ್ಳುವುದು ತಡವಾಗಿದೆ ಎನ್ನಲಾಗಿದೆ.

ಚಿತ್ರದಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ ಸೇರಿದಂತೆ ವಿಶಾಕ್ ನಾಯರ್ ಸಹ ನಟಿಸಿದ್ದಾರೆ.

ಕಂಗನಾ ಸ್ವತಃ ಕಥೆ ಬರೆದು, ನಿರ್ದೇಶಕಿ ಆಗಿಯೂ ಈ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರಲಿದ್ದಾರೆ.

ಈ ಮೊದಲು ಕಂಗನಾ ಅವರು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಜೀವನಾಧಾರಿತ ಚಿತ್ರ ‘ತಲೈವಿ‘ ಮತ್ತು ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜೀವನಾಧಾರಿತ ಚಿತ್ರ ‘ಮಣಿಕರ್ಣಿಕಾ‘ದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT