ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಸೋಮವಾರ ವಿಚಾರಣೆಗೆ ಹಾಜರಾಗಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಸತತ ಐದು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.
ಕಿಚ್ಚ ಸುದೀಪ್ ಅಭಿನಯದ ಬಿಗ್ಬಜೆಟ್ ಚಿತ್ರ ‘ವಿಕ್ರಾಂತ್ ರೋಣ’ದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕುವುದರ ಜೊತೆಗೆ ವಿಶೇಷ ಪಾತ್ರದಲ್ಲೂ ಜಾಕ್ವೆಲಿನ್ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಜಾಕ್ವೆಲಿನ್ ಅವರ ಪಾತ್ರದ ಫಸ್ಟ್ಲುಕ್ ಸಹ ಬಿಡುಗಡೆಯಾಗಿತ್ತು.
Enforcement Directorate (ED) is questioning Bollywood actress Jacqueline Fernandez in Delhi for the last five hours, in a money laundering case.