ಮಂಗಳವಾರ, ಅಕ್ಟೋಬರ್ 20, 2020
25 °C

‘ಎವಿಡೆನ್ಸ್‌’ ಚಿತ್ರೀಕರಣ ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಒಂದೇ ಜಾಗ, ಎರಡೇ ಪಾತ್ರ. ಇದು ‘ಎವಿಡೆನ್ಸ್’ ಚಿತ್ರದ ವಿಶೇಷ. ಈ ಚಿತ್ರಕ್ಕೆ ಪ್ರವೀಣ್ ರಾಮಕೃಷ್ಣ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಕನಕಪುರ ಮುಖ್ಯರಸ್ತೆಯಲ್ಲಿರುವ ಭೂಮಿಕಾ ಸ್ಟುಡಿಯೋದಲ್ಲಿ ಚಿತ್ರದ ಶೂಟಿಂಗ್‌ ಇತ್ತೀಚೆಗಷ್ಟೇ ಪೂರ್ಣಗೊಂಡಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಚಿತ್ರತಂಡ ಕೈಗೆತ್ತಿಕೊಂಡಿದೆ.

ಸಸ್ಪೆನ್ಸ್ , ಥ್ರಿಲ್ಲರ್ ಜಾನರಿನ ಈ ಚಿತ್ರದಲ್ಲಿ ಈವರೆಗೆ ಎಲ್ಲೂ ಅನಾವರಣಗೊಳ್ಳದ ಕಥಾವಸ್ತುವೊಂದು ಇದೆ. ಒಂದೇ ಸ್ಥಳದಲ್ಲಿ, ಎರಡೇ ಪಾತ್ರಗಳ ಮೂಲಕ ಇಡೀ ಚಿತ್ರದ ಕಥೆ ಅನಾವರಣವಾಗಲಿದೆ. ರೋಬೋ ಗಣೇಶ್ ಮತ್ತು ಮಾನಸ ಜೋಷಿ ಆ ಎರಡು ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ ಎನ್ನುತ್ತಾರೆ ನಿರ್ದೇಶಕ ಪ್ರವೀಣ್ ರಾಮಕೃಷ್ಣ.

ಧೃತಿ ಪ್ರೊಡಕ್ಷನ್ಸ್ ಅಡಿಯಲ್ಲಿ ಪ್ರವೀಣ್ ಮತ್ತು ಅವರ ಸ್ನೇಹಿತರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರವಿ ಸುವರ್ಣ ಛಾಯಾಗ್ರಹಣ, ಕಾರ್ತಿಕ್ ವೆಂಕಟೇಶ್ ಸಂಗೀತ ಈ ಚಿತ್ರಕ್ಕಿದೆ. 

‘ಒಂದೇ ಜಾಗ ಮತ್ತು ಎರಡು ಪಾತ್ರಗಳನ್ನು ಬಳಸಿಕೊಂಡು ಇಡೀ ಸಿನಿಮಾ ಕಟ್ಟಿಕೊಡುವುದು ನಿಜಕ್ಕೂ ಸವಾಲಿನ ಕೆಲಸ. ನಿರ್ದೇಶಕ ಪ್ರವೀಣ್ ಅವರ ಕಲ್ಪನೆಯೇ ಅದ್ಭುತ. ಪ್ರೇಕ್ಷಕನನ್ನು ಅರೆಕ್ಷಣವೂ ಅತ್ತಿತ್ತ ಅಲುಗಾಡದಂತೆ ಹಿಡಿದಿಡುವ ಶಕ್ತಿ ಈ ಚಿತ್ರಕ್ಕಿದೆ’ ಎನ್ನುತ್ತಾರೆ ಛಾಯಾಗ್ರಾಹಕ ರವಿ ಸುವರ್ಣ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು