ಮಂಗಳವಾರ, ಮಾರ್ಚ್ 9, 2021
29 °C

ಎಕ್ಸ್‌ಪ್ರೆಶನ್ ಕ್ವೀನ್‌ ರಶ್ಮಿಕಾ ಈಗ ‘ನ್ಯಾಷನಲ್ ಕ್ರಷ್’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Rashmika Mandanna

ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಸಿನಿರಂಗಕ್ಕೆ ಅಡಿಯಿಟ್ಟ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಈಗ ನ್ಯಾಷನಲ್ ಕ್ರಷ್ ಆಗಿದ್ದಾರೆ. ಗೂಗಲ್ ಈ ವಿಷಯವನ್ನು ಬಹಿರಂಗ ಪಡಿಸಿದೆ.

ತೆಲುಗು ಹಾಗೂ ಕನ್ನಡ ಸಿನಿಮಾರಂಗದಲ್ಲಿ ಹೆಚ್ಚು ಬೇಡಿಕೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಒಂದರ ಹಿಂದೆ ಒಂದು ಯಶಸ್ವಿ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೇ ಅನೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ. ಜೊತೆಗೆ ದಕ್ಷಿಣಭಾರತದಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಇವರು ಸದಾ ಪೋಸ್ಟ್ ಹಾಗೂ ವಿಡಿಯೊಗಳನ್ನು ಅಪ್‌ಲೋಡ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ.

ಇತ್ತೀಚೆಗೆ ಗೂಗಲ್‌ನ ಸರ್ಚ್ ಇಂಜಿನ್ ರಶ್ಮಿಕಾಗೆ ಸರ್ಪಸ್ರೈ ನೀಡಿದೆ. ಅದೇನೆಂದರೆ ಈ ವರ್ಷದಲ್ಲಿ ಗೂಗಲ್‌ನಲ್ಲಿ ಅತೀ ಹೆಚ್ಚು ಹುಡುಕಿದ ನಟಿಯರಲ್ಲಿ ರಶ್ಮಿಕಾ ಅವರ ಹೆಸರು ಮೊದಲ ಸ್ಥಾನದಲ್ಲಿದೆ. ಆ ಕಾರಣಕ್ಕೆ ಗೂಗಲ್ ರಶ್ಮಿಕಾ ಅವರನ್ನು ‘ನ್ಯಾಷನಲ್ ಕ್ರಶ್‌ ಆಫ್ ಇಂಡಿಯಾ’ ಎಂದು ಗುರುತಿಸಿದೆ.

ತೆಲುಗಿನ ‘ಚಲೋ’ ಸಿನಿಮಾದ ಮೂಲಕ ಟಾಲವುಡ್‌ಗೆ ಎಂಟ್ರಿ ಕೊಟ್ಟಿದ್ದರು ರಶ್ಮಿಕಾ. ವಿಜಯ್ ದೇವರಕೊಂಡ ಜೊತೆ ನಟಿಸಿದ್ದ ‘ಗೀತಾ ಗೋವಿಂದಂ’ ಸಿನಿಮಾದಿಂದ ಟಾಲಿವುಡ್‌ನ ಟಾಪ್‌ ಹೀರೊಯಿನ್‌ಗಳ ಪಟ್ಟಿಯಲ್ಲಿ ಹೆಸರು ಗಿಟ್ಟಿಸಿಕೊಂಡಿದ್ದರು. ಸದ್ಯ ಆಕೆ ಅಲ್ಲು ಅರ್ಜುನ್ ನಟನೆಯ ‘ಪುಷ್ಪಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು