ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸದ ಆಮಿಷ: ನಟಿ ವಿದ್ಯಾಬಾಲನ್‌ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್‌ ಖಾತೆ

Published 21 ಫೆಬ್ರುವರಿ 2024, 10:36 IST
Last Updated 21 ಫೆಬ್ರುವರಿ 2024, 10:36 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟಿ ವಿದ್ಯಾಬಾಲನ್‌ ಹೆಸರಿನಲ್ಲಿ ಅಪರಿಚಿತ ವ್ಯಕ್ತಿ, ನಕಲಿ ಇನ್‌ಸ್ಟಾಗ್ರಾಮ್‌ ಹಾಗೂ ಇ– ಮೇಲ್‌ ಖಾತೆ ಸೃಷ್ಟಿಸಿ, ಜನರಿಗೆ ಮೋಸ ಮಾಡಿರುವುದರ ಬಗ್ಗೆ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಈ ಸಂಬಂಧ ನಟಿ ವಿದ್ಯಾಬಾಲನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ವಿದ್ಯಾಬಾಲನ್‌ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿದ ಅಪರಿಚಿತರು, ಚಿತ್ರರಂಗದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದಿದ್ದಾರೆ. ನಟಿಯ ಸಿಬ್ಬಂದಿಯೊಬ್ಬರಿಗೆ( ಸ್ಟೈಲಿಸ್ಟ್) ನಕಲಿ ಖಾತೆ ಬಗ್ಗೆ ಮಾಹಿತಿ ದೊರೆತಿದೆ. ನಂತರ ಆತ ನಟಿಗೆ ಮಾಹಿತಿ ನೀಡಿದ್ದಾರೆ.

ಅಪರಿಚಿತ ವ್ಯಕ್ತಿಗಳು ನಟಿಯ ಹೆಸರಿನಲ್ಲಿ ಚಿತ್ರರಂಗದವರನ್ನು ಸಂಪರ್ಕಿಸಿ, ಕೆಲಸದ ವಿಚಾರವಾಗಿ ಚರ್ಚಿಸಲು ಇಚ್ಛಿಸುವುದಾಗಿಯೂ ಸಂದೇಶವನ್ನು ರವಾನಿಸಿದ್ದಾರೆ ಎಂಬುವುದರ ಬಗ್ಗೆಯೂ ದೂರಿನಲ್ಲಿ ನಟಿ ವಿದ್ಯಾಬಾಲನ್‌ ಉಲ್ಲೇಖಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT