ಸೋಮವಾರ, ಡಿಸೆಂಬರ್ 6, 2021
26 °C

ಅಪ್ಪು ಫೋಟೊ ಹಿಡಿದು ಶಬರಿಮಲೆಗೆ ತೆರಳಿದ ಅಯ್ಯಪ್ಪ ಸ್ವಾಮಿ ಭಕ್ತ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Puneeth Rajkumar Photo

ಬೆಂಗಳೂರು: ನಟ ಮತ್ತು ಸಮಾಜಸೇವಕ ಪುನೀತ್ ರಾಜ್‌ಕುಮಾರ್ ಅವರು ನಿಧನರಾಗಿ ಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಆದರೆ, ಅವರ ಅಭಿಮಾನಿಗಳಿಗೆ ಇನ್ನೂ ಪುನೀತ್ ನೆನಪಿನಿಂದ ಹೊರಬರಲಾಗುತ್ತಿಲ್ಲ.

ಇದೇ ರೀತಿಯಲ್ಲಿ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಯೂ, ಶಬರಿಮಲೆ ಅಯ್ಯಪ್ಪ ಸ್ವಾಮಿಯ ಭಕ್ತರೂ ಆಗಿರುವ ವ್ಯಕ್ತಿಯೊಬ್ಬರು, ಸನ್ನಿಧಾನದ ಮೆಟ್ಟಿಲು ಏರುವ ಸಂದರ್ಭದಲ್ಲಿ ಅಪ್ಪು ಫೋಟೊ ಹಿಡಿದುಕೊಂಡಿರುವ ವಿಡಿಯೊ ಒಂದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ನಟ ಮತ್ತು ನಿರ್ದೇಶಕ ರಿಷಭ್ ಶೆಟ್ಟಿ ಅವರು ಟ್ವಿಟರ್‌ನಲ್ಲಿ ಈ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ಶಬರಿಮಲೆ ದರ್ಶನ ಆರಂಭವಾಗಿದ್ದು, ರಾಜ್ಯದಿಂದ ಸಾವಿರಾರು ಭಕ್ತರು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾರೆ.

ಈ ಸಂದರ್ಭದಲ್ಲಿ ಅಪ್ಪುವಿನ ಫೋಟೊವನ್ನು ಕೂಡ ಜತೆಗೆ ತೆಗೆದುಕೊಂಡು ಹೋಗುವ ಮೂಲಕ ಅಭಿಮಾನಿಯೊಬ್ಬರು ತಮ್ಮ ಪ್ರೀತಿ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು