ಮಂಗಳವಾರ, ಜನವರಿ 18, 2022
22 °C

ನಟೇಶ್ ಹೆಗಡೆ ಅವರ ‘ಪೆಡ್ರೊ’ಗೆ ಅಂತರರಾಷ್ಟ್ರೀಯ ಸಿನಿಮಾ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ‘ಫೆಸ್ಟಿವಲ್‌ ದೆ 3 ಕಾಂಟಿನೆಂಟ್ಸ್‌’ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಟೇಶ ಹೆಗಡೆ ನಿರ್ದೇಶನದ ‘ಪೆಡ್ರೊ’ ಸಿನಿಮಾ ಪ್ರಶಸ್ತಿ ಪಡೆದಿದೆ. 

ಬೂಸನ್‌ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಬಿಎಫ್‌ಐ ಲಂಡನ್‌ ಚಲನಚಿತ್ರೋತ್ಸವ ಸೇರಿದಂತೆ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ‘ಪೆಡ್ರೊ’ ಪ್ರದರ್ಶನ ಕಂಡಿತ್ತು. ಇತ್ತೀಚೆಗೆ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಆಯೋಜನೆಗೊಂಡ ಪಿಂಗ್ಯಾವ್‌ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 5ನೇ ಆವೃತ್ತಿಯಲ್ಲಿ ಈ ಚಿತ್ರದ ನಿರ್ದೇಶನಕ್ಕಾಗಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ನಟೇಶ ಅವರು ಪಡೆದಿದ್ದರು.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ನಟೇಶ ಅವರ ಚೊಚ್ಚಲ ನಿರ್ದೇಶನದ ಚಿತ್ರ ‘ಪೆಡ್ರೊ’. ‘ಪೆಡ್ರೊ’ ಮಧ್ಯಮ ವರ್ಗದ ಎಲೆಕ್ಟ್ರಿಷಿಯನ್‌ ಒಬ್ಬನ ಕಥೆಯಾಗಿದ್ದು, ಈ ಚಿತ್ರವನ್ನು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ನಟ ರಾಜ್‌ ಬಿ.ಶೆಟ್ಟಿ ಅವರೂ ಈ ಚಿತ್ರದಲ್ಲಿ ಬಣ್ಣಹಚ್ಚಿದ್ದು, ಮುಖ್ಯಭೂಮಿಕೆಯಲ್ಲಿ ನಟೇಶ ಅವರ ತಂದೆ ಗೋಪಾಲಕೃಷ್ಣ ಹೆಗಡೆಯವರೇ ನಟಿಸಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು