ಶುಕ್ರವಾರ, ಮೇ 20, 2022
27 °C

ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಕಟ್ಟೆ ರಾಮಚಂದ್ರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಕಟ್ಟೆ ರಾಮಚಂದ್ರ(75) ಅವರು ಶುಕ್ರವಾರ ಕೋವಿಡ್‌ನಿಂದಾಗಿ ನಗರದ ಸೆಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಮೂರು ದಿನಗಳ ಹಿಂದೆ ಅವರ ಪತ್ನಿಯೂ ನಿಧನರಾಗಿದ್ದರು.

ಚಿತ್ರರಂಗದಲ್ಲಿ ಹಲವು ದಶಕಗಳಿಂದ ಸಕ್ರಿಯರಾಗಿದ್ದ ರಾಮಚಂದ್ರ ಅವರು, ವೈಶಾಖದ ದಿನಗಳು, ಮಹಾಲಕ್ಷ್ಮೀ ಚಿತ್ರಗಳನ್ನು ನಿರ್ಮಿಸಿದ್ದರು. ಮನೆ ಮನೆ ಕಥೆ. ಅಲೆಗಳು ಮತ್ತು ಇತರ ಧಾರಾವಾಹಿಗಳಲ್ಲಿ ನಟಿಸಿದ್ದರು. ಅವರ ನಿರ್ದೇಶನದ ‘ಅರಿವು’ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ದೊರಕಿತ್ತು. ‘ತನು ನಿನ್ನದು ಮನ ನಿನ್ನದು’ ಧಾರಾವಾಹಿ ನಿರ್ಮಾಣ, ನಿರ್ದೇಶನ ಮಾಡಿದ್ದರು.

ಮಧ್ಯಾಹ್ನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು