ಬೆಂಗಳೂರು: ಅಪಘಾತದಿಂದ ತೀವ್ರ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಜೂನ್ 26ರಂದು ಅವರು ಚಲಾಯಿಸುತ್ತಿದ್ದ ಇನೋವಾ ಕಾರು ನೆಲ್ಲೂರು ಬಳಿ ಅಪಘಾತಕ್ಕೊಳಗಾಗಿತ್ತು. ಚಿತ್ತೂರಿನಿಂದ ಹೈದರಾಬಾದ್ ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು. ತಲೆ ಹಾಗೂ ಮೂಗಿಗೆ ಗಂಭೀರವಾಗಿ ಗಾಯಗಳಾಗಿದ್ದವು. ಅವರು, 14 ದಿನಗಳ ಕಾಲ ದಿನಗಳ ಕಾಲ ಜೀವನ್ಮರಣ ಸ್ಥಿತಿಯಲ್ಲಿದ್ದರು.
’ನೇನೆರಾಜು ನೇನೆಮಂತ್ರಿ’, ‘ಕ್ರ್ಯಾಕ್‘,‘ಅಮ್ಮ ರಾಜ್ಯಂಲೋ ಕಡಪ ಬಿಡ್ಡಲು’ ಚಿತ್ರಗಳಲ್ಲಿ ಪಾತ್ರ ನಿರ್ವಹಿಸಿದ್ದರು. ಬಿಗ್ ಬಾಸ್ ಸೀಸನ್ 1ರಲ್ಲೂ ಅವರು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.