ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಇವರು ಮುಂಬೈನ ಗೋರೆಗಾಂ ಪ್ರಾಂತ್ಯದಲ್ಲಿ ‘ಗಂಗೂಬಾಯಿ ಕಾಥಿಯಾವಾಡಿ’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಗಂಗೂಬಾಯಿ ಕಾಥಿಯಾವಾಡಿ ಸಿನಿಮಾದಲ್ಲಿ ಆಲಿಯಾ ಭಟ್ ನಾಯಕಿಯಾಗಿ ನಟಿಸುತ್ತಿದ್ದಾರೆ.

ಮೂಲಗಳ ಪ್ರಕಾರ ಬನ್ಸಾಲಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಅವರು ಸೆಲ್ಫ್ ಕ್ವಾರಂಟೈನ್‌ನಲ್ಲಿದ್ದಾರೆ. ಚಿತ್ರದ ನಾಯಕ ರಣಬೀರ್ ಕಪೂರ್ ಅವರಿಗೂ ಪಾಸಿಟಿವ್ ಬಂದಿರುವ ಕಾರಣ ಆಲಿಯಾ ಭಟ್ ಕೂಡ ಕ್ವಾರಂಟೈನ್‌ನಲ್ಲಿದ್ದಾರೆ. ಸಂಜಯ್ ಅವರ ಸಂಪರ್ಕಕ್ಕೆ ಬಂದಿರುವ ಎಲ್ಲರಿಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ನಟ ಅಜಯ್ ದೇವಗನ್ ಕೂಡ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ಅವರು ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಚಿತ್ರತಂಡ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು ಎಲ್ಲರೂ ಕ್ವಾರಂಟೈನ್‌ನಲ್ಲಿದ್ದಾರೆ ಎನ್ನುತ್ತಿವೆ ಮೂಲಗಳು.

ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಸಿನಿಮಾ ಶೂಟಿಂಗ್ ಸಂಬಂಧಿಸಿದ ಯಾವುದೇ ಸ್ವಷ್ಟ ಚಿತ್ರಣವೂ ಸಿಕ್ಕಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.