ನಟ ಕೋಮಲ್ ಕುಮಾರ್ ಅಭಿನಯದ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ಇತ್ತಿಚೆಗಷ್ಟೇ ಬಿಡುಗಡೆಗೊಂಡಿದೆ. ಸಂದೇಶ್ ಶೆಟ್ಟಿ ಆಜ್ರಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇವರು ಈ ಹಿಂದೆ ‘ಕತ್ತಲೆ ಕೋಣೆ’, ‘ಇನಾಂದಾರ್’, ‘ಗುಂಮ್ಟಿ’ ಚಿತ್ರಗಳನ್ನು ನಿರ್ದೇಶಿಸಿದ್ದರು.

‘ಸಿನಿಮಾದ ಶೀರ್ಷಿಕೆಯೇ ಹೇಳುವಂತೆ, ಇದೊಂದು ವಿಭಿನ್ನ ಸಿನಿಮಾ. ಎರಡು ಕಾಲಘಟ್ಟಗಳಲ್ಲಿ ಈ ಸಿನಿಮಾದ ಕಥೆಯನ್ನು ನಿರ್ದೇಶಕರು ವಿಭಿನ್ನವಾಗಿ ಹೇಳುತ್ತಿದ್ದಾರೆ. ಕಾಮಿಡಿ, ಮನರಂಜನೆಯ ಜತೆ ಬೇರೆ ಒಂದಷ್ಟು ವಿಷಯಗಳು ಕೂಡ ಈ ಸಿನಿಮಾದಲ್ಲಿರಲಿದೆ. ಈ ಸಿನಿಮಾದಲ್ಲಿ ಒಂದು ಗೆಟಪ್ನಲ್ಲಿ ನಾನು ಸಿನಿಮಾ ನಿರ್ದೇಶಕನ ಪಾತ್ರ ಮಾಡಲಿದ್ದು, ಮತ್ತೊಂದು ಪಾತ್ರದ ಬಗ್ಗೆ ಈಗಲೇ ಹೇಳಲಾರೆ. ಒಟ್ಟಿನಲ್ಲಿ ಎರಡು ಶೇಡ್ ಇರುವಂಥ ಪಾತ್ರ’ ಎಂದು ಮಾಹಿತಿ ನೀಡಿದರು ಕೋಮಲ್.

‘ಜ್ಯೋತಿ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ವಿಕಾಸ್ ಎಸ್.ಶೆಟ್ಟಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅನುಷಾ ರೈ ನಾಯಕಿ. ಮೇಘನಾ ರಾಜ್ ಕೂಡ ಈ ಚಿತ್ರದ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಎಂ.ಕೆ.ಮಠ, ಪ್ರಕಾಶ್ ತುಮ್ಮಿನಾಡು, ವರ್ಧನ್ ತೀರ್ಥಹಳ್ಳಿ, ಸಂದೇಶ್ ಶೆಟ್ಟಿ ಆಜ್ರಿ, ಸಿರಿಜಾ, ಪ್ರಶಾಂತ್ ಸಿದ್ಧಿ ಮುಂತಾದವರು ನಟಿಸಿದ್ದಾರೆ.

‘ಕೋಮಲ್ ಅವರನ್ನು ಹಿಂದೆಂದೂ ನೋಡಿರದ ರೀತಿಯಲ್ಲಿ ಈ ಸಿನಿಮಾದಲ್ಲಿ ಕಾಣುತ್ತಾರೆ. ಇಡೀ ಸಿನಿಮಾದ ಮೊದಲಾರ್ಧ ಹಾಸ್ಯಭರಿತವಾಗಿ ಸಾಗಿದರೆ, ದ್ವಿತೀಯಾರ್ಧ ಸಸ್ಪೆನ್ಸ್-ಥ್ರಿಲ್ಲರ್ ಅಂಶಗಳ ಜೊತೆ ಸಾಗುತ್ತದೆ. ಹಿಸ್ಟಾರಿಕಲ್ ಕಾಮಿಡಿ ಶೈಲಿಯ ಈ ಸಿನಿಮಾದಲ್ಲಿ ಮನರಂಜನೆಯ ಜತೆಗೆ, ಇಂದಿನ ಕೆಲ ಸಾಮಾಜಿಕ ವಿಷಯಗಳನ್ನೂ ಹೇಳುತ್ತಿದ್ದೇವೆ. ಕುಂದಾಪುರ, ಕಾಸರಗೋಡು, ಕೇರಳ, ರಾಜಸ್ಥಾನ, ಹಂಪಿ ಮೊದಲಾದ ಕಡೆಗಳಲ್ಲಿ ಚಿತ್ರೀಕರಣಕ್ಕೆ ಯೋಜನೆ ಹಾಕಿಕೊಂಡಿದ್ದೇವೆ. ಮುಂದಿನ ವರ್ಷದ ಆರಂಭದಲ್ಲಿಯೇ ಈ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಿದೆ’ ಎಂದರು ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ.

ಪ್ರಾಂಶು ಜಾ ಸಂಗೀತ, ಸಜೀಶ್ ರಾಜ್ ಛಾಯಾಚಿತ್ರಗ್ರಹಣ, ಶಿವರಾಜ್ ಮೇಹು ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.