ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅನೂಪ್‌, ಧನ್ಯಾ ಅಭಿನಯದ ‘ಹೈಡ್ ಆ್ಯಂಡ್‌ ಸೀಕ್’ ಟ್ರೇಲರ್‌ ಬಿಡುಗಡೆ

Published 29 ಫೆಬ್ರುವರಿ 2024, 23:44 IST
Last Updated 29 ಫೆಬ್ರುವರಿ 2024, 23:44 IST
ಅಕ್ಷರ ಗಾತ್ರ

ಅನೂಪ್ ರೇವಣ್ಣ ಹಾಗೂ ಧನ್ಯಾ ರಾಮ್‌ಕುಮಾರ್‌ ಜೋಡಿಯಾಗಿ ನಟಿಸಿರುವ ‘ಹೈಡ್ ಆ್ಯಂಡ್‌ ಸೀಕ್’ ಚಿತ್ರದ ಟ್ರೇಲರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮತ್ತು ಮಾಜಿ ಸಚಿವ ಎಚ್‌.ವಿಶ್ವನಾಥ್ ಟ್ರೇಲರ್‌ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. 

ಸುನೇರಿ ಆರ್ಟ್ ಕ್ರಿಯೇಶನ್ಸ್ ಮೂಲಕ ಪುನೀತ್ ನಾಗರಾಜು ಹಾಗೂ ವಸಂತ್‌ರಾವ್ ಎಂ.ಕುಲಕರ್ಣಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪುನೀತ್ ನಾಗರಾಜು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರ ಮಾರ್ಚ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

‘ಕಿಡ್ನಾಪ್‌ ಕೂಡ ಹೇಗೆ ಒಂದು ಸಂಸ್ಥೆಯ ಮೂಲಕ ವ್ಯವಸ್ಥಿತವಾಗಿ ನಡೆಯುತ್ತದೆ ಎಂಬುದನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಬೆಂಗಳೂರು, ಮಾಗಡಿ, ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಿಸಿದ್ದೇವೆ. ನಾಯಕನೇ ಕಿಡ್ನಾಪರ್ ಆಗಿದ್ದು, ಹೆಚ್ಚು ಮಾತನಾಡದ, ಯಾವುದನ್ನೂ ಮುಕ್ತವಾಗಿ ಹೇಳದ ಪಾತ್ರವಿದು’ ಎಂದು ನಿರ್ದೇಶಕ ಪುನೀತ್ ವಿವರಿಸಿದರು.

ರಿಜೋ ಪಿ.ಜಾನ್ ಛಾಯಾಚಿತ್ರಗ್ರಹಣ, ಸ್ಯಾಂಡಿ ಅದಾನ್ಕಿ ಅವರ ಸಂಗೀತ ಸಂಯೋಜನೆ, ಮಧು ತುಂಬಕೆರೆ ಸಂಕಲನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT