ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಉಪಾಧ್ಯಕ್ಷ'ನಾಗಿ ಚಿಕ್ಕಣ್ಣ ದರ್ಬಾರ್‌

Published 27 ಅಕ್ಟೋಬರ್ 2023, 0:10 IST
Last Updated 27 ಅಕ್ಟೋಬರ್ 2023, 0:10 IST
ಅಕ್ಷರ ಗಾತ್ರ

ಹಾಸ್ಯ ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ‘ಉಪಾಧ್ಯಕ್ಷ’ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಉಮಾಪತಿ ಫಿಲಂಸ್ ಲಾಂಛನದಲ್ಲಿ ಸ್ಮಿತ ಉಮಾಪತಿ ನಿರ್ಮಿಸಿರುವ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

‘‘ಇದು ‘ಅಧ್ಯಕ್ಷ’ ಚಿತ್ರದ ಮುಂದುವರೆದ ಭಾಗ. ಚಂದ್ರ ಮೋಹನ್ ಕಥೆ ಬರೆದಿದ್ದಾರೆ. ಚಿತ್ರಕಥೆಗೆ ನಿರ್ದೇಶಕರಾದ ಸೂರಿ, ತರುಣ್ ಸುಧೀರ್ ಮುಂತಾದವರು ಸಹಾಯ ಮಾಡಿದ್ದಾರೆ. ನವೆಂಬರ್‌ನಲ್ಲಿ ಚಿತ್ರ ತೆರೆಗೆ ಬರಲಿದೆ’’ ಎಂದರು ನಿರ್ಮಾಪಕ ಉಮಾಪತಿ ಶ್ರೀನಿವಾಸ್.

‘ನಾನು ಈ ಚಿತ್ರದ ನಾಯಕ ಅಂದಕೂಡಲೆ ಸಾಕಷ್ಟು ಜನ ಸಾಕಷ್ಟು ಚುಚ್ಚು ಮಾತನಾಡಿ ಮನಸ್ಸು ನೋಯಿಸಿದ್ದಾರೆ. ಚಿತ್ರರಂಗದಲ್ಲಿ 13 ವರ್ಷಗಳಲ್ಲಿ ಕಂಡಿರದ ನೋವು, ಕಷ್ಟವನ್ನು ಈ ಚಿತ್ರದಲ್ಲಿ ಅನುಭವಿಸಿದೆ. ಆದರೆ ನಿರ್ಮಾಪಕರು ಜೊತೆಗೆ ನಿಂತು ಚಿತ್ರ ಪೂರೈಸಿಕೊಟ್ಟಿದ್ದಾರೆ’ ಎಂದು ನಟ ಚಿಕ್ಕಣ್ಣ ಬೇಸರತೋಡಿಕೊಂಡರು.

ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ಮಲೈಕ ಈ ಚಿತ್ರದಲ್ಲಿ ಚಿಕ್ಕಣ್ಣನಿಗೆ ಜೋಡಿಯಾಗಿದ್ದಾರೆ. ರವಿಶಂಕರ್, ಸಾಧು ಕೋಕಿಲಾ, ವೀಣಾ ಸುಂದರ್ ಸೇರಿದಂತೆ ಇನ್ನೂ ಅನೇಕರು ಈ ಚಿತ್ರದಲ್ಲಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತವಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT