ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗರುಡ ಪುರಾಣ’ದಲ್ಲಿ ರಿಷಿ

Published 2 ಮೇ 2024, 22:39 IST
Last Updated 2 ಮೇ 2024, 22:39 IST
ಅಕ್ಷರ ಗಾತ್ರ

‘ಆಪರೇಶನ್ ಅಲಮೇಲಮ್ಮ’, ‘ಕವಲುದಾರಿ’ಯಂತಹ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಟ ರಿಷಿ ಸದ್ಯ ‘ರುದ್ರ ಗರುಡ ಪುರಾಣ’ ಓದಲು ಸಿದ್ಧರಾಗಿದ್ದಾರೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಇತ್ತೀಚೆಗಷ್ಟೇ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಕೋರಿದರು.

ರಿಷಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ(ತನಿಖಾಧಿಕಾರಿ) ಕಾಣಿಸಿಕೊಂಡಿದ್ದಾರೆ. ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ‘ಚಂಬಲ್’, ‘ಡಿಯರ್ ವಿಕ್ರಮ್’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಆ್ಯಕ್ಷನ್‌–ಕಟ್‌ ಹೇಳಿದ್ದಾರೆ.

‘ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಜುಲೈ ವೇಳೆಗೆ ಚಿತ್ರವನ್ನು ಬಿಡುಗಡೆ ಮಾಡುವ ಆಲೋಚನೆ ಇದೆ’ ಎಂದರು ನಿರ್ದೇಶಕರು. 

ರಿಷಿ ಅವರಿಗೆ ಜೋಡಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ. ವಿನೋದ್ ಆಳ್ವ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದು, ರಘು ನಿಡುವಳ್ಳಿ ಸಂಭಾಷಣೆಯಿದೆ. ಕೆಪಿ ಸಂಗೀತ ನಿರ್ದೇಶನ, ಸಂದೀಪ್ ಕುಮಾರ್ ಛಾಯಾಚಿತ್ರಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT