ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಟೈಮ್ ಬರುತ್ತೆ’ ಎಂದ ‘ಗೌರಿ’ 

Published 12 ಮೇ 2024, 15:25 IST
Last Updated 12 ಮೇ 2024, 15:25 IST
ಅಕ್ಷರ ಗಾತ್ರ

ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ನಾಯಕನಾಗಿ ಅಭಿನಯಿಸಿರುವ ‘ಗೌರಿ’ ಚಿತ್ರದ ಮೊದಲ ಗೀತೆ ‘ಟೈಮ್ ಬರುತ್ತೆ’ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಇಂದ್ರಜಿತ್ ಲಂಕೇಶ್ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ.

ಚಿತ್ರದ ಈ ಚೊಚ್ಚಲ ಗೀತೆಗೆ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಸಂಗೀತ ನೀಡಿ, ಹಾಡಿದ್ದಾರೆ. ‌

‘ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿವೆ. ಐದು ಜನ ಸಂಗೀತ ನಿರ್ದೇಶಕರು ಈ ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಭಾರತದ ಹನ್ನೆರಡಕ್ಕೂ ಅಧಿಕ ಹೆಸರಾಂತ ಗಾಯಕರು ಹಾಡಿದ್ದಾರೆ. ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ‌. ಇದರ ಜೊತೆಗೆ ಈ ಹಾಡಿಗೆ ನಾಯಕ ಸಮರ್ಜಿತ್, ನಾಯಕಿ ಸಾನ್ಯಾ ಅಯ್ಯರ್ ಹಾಗೂ ನಟಿ ಸಂಯುಕ್ತ ಹೆಗಡೆ ರೀಲ್ಸ್ ಕೂಡ ಮಾಡಿದ್ದಾರೆ‌. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌‌’ ಎಂದರು ಇಂದ್ರಜಿತ್‌ ಲಂಕೇಶ್‌.

ಎ.ಜೆ. ಶೆಟ್ಟಿ ಅವರ ಛಾಯಾಗ್ರಹಣವಿದ್ದು, ಮಾಸ್ತಿ ಮಂಜು ಮತ್ತು ಬಿ.ಎ. ಮಧು ಸಂಭಾಷಣೆಯಿದೆ. ‘ಕಾಂತಾರ’ ಚಿತ್ರದ ಖ್ಯಾತಿಯ ಮಾನಸಿ ಸುಧೀರ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT