ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆರೆ ಮೇಲೂ ಜೋಡಿಯಾದ ವಸಿಷ್ಠ–ಹರಿಪ್ರಿಯಾ

Published 26 ಮೇ 2023, 1:10 IST
Last Updated 26 ಮೇ 2023, 1:10 IST
ಅಕ್ಷರ ಗಾತ್ರ

ರಿಯಲ್‌ ಲೈಫ್‌ನ ಜೋಡಿ ನಟ ವಸಿಷ್ಠ ಸಿಂಹ ಹಾಗೂ ಹರಿಪ್ರಿಯ ಇದೇ ಮೊದಲ ಸಲ ತೆರೆಮೇಲೆಯೂ ಒಂದಾಗಿದ್ದಾರೆ. ಸಾವಿನ ರಹಸ್ಯವನ್ನು ಭೇದಿಸುವ ‘ಯದಾ ಯದಾ ಹಿ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದಾರೆ.

ಇತ್ತೀಚೆಗಷ್ಟೆ ಚಿತ್ರದ ಟ್ರೇಲರ್‌ ಬಿಡುಗಡೆಗೊಂಡಿದ್ದು, ನಟ ದಿಗಂತ್‌ ಕೂಡ ಮೊದಲ ಸಲ ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗು ಮೂಲದ ಅಶೋಕ ತೇಜ ನಿರ್ದೇಶನದ ಚಿತ್ರ ಜೂನ್ 2ರಂದು ಈ ಚಿತ್ರ ರಾಜ್ಯದಾದ್ಯಂತ ತೆರೆಕಾಣುತ್ತಿದ್ದು, ಶಾಲಿನಿ ಎಂಟರ್‌ಪ್ರೈಸಸ್ ಮೂಲಕ ಜಾಕ್‌ ಮಂಜು ಅವರು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

ಚಿತ್ರದ ಟೈಟಲ್‌ ಸಾಂಗ್‌ಗೆ ವಸಿಷ್ಠ ಸಿಂಹ ಹಾಗೂ ಹರಿಪ್ರಿಯ ದನಿಯಾಗಿದ್ದಾರೆ. ಇದೊಂದು ತೆಲಗಿನ ‘ಎವರು’ ಸಿನಿಮಾದ ರಿಮೇಕ್‌ ಇದಾಗಿದ್ದು, ಅಲ್ಲಿ ನಟಿ ರೆಜಿನಾ ಅವರು ನಿರ್ವಹಿಸಿದ್ದ ಪಾತ್ರವನ್ನು, ಇಲ್ಲಿ ಹರಿಪ್ರಿಯಾ ಅವರು ಮಾಡಿದ್ದಾರೆ. ಹಿರಿಯ ನಟ ಅವಿನಾಶ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಗೈಸ್ ಅಂಡ್ ಡಾಲ್ಸ್‌ ಕ್ರಿಯೇಶನ್ಸ್ ಮೂಲಕ ಹೈದರಾಬಾದ್ ಮೂಲದ ರಾಜೇಶ್ ಅಗರವಾಲ್ ಅವರು ಬಂಡವಾಳ ಹೂಡಿದ್ದಾರೆ.

'ಕೇರಳದ ಮುನ್ನಾರ್, ಚಿಕ್ಕಮಗಳೂರು, ಹೈದರಾಬಾದ್ ಹಾಗೂ ಬೆಂಗಳೂರು ಸುತ್ತಮುತ್ತ ಸುಮಾರು 55 ದಿನಗಳ ಕಾಲ ಚಿತ್ರೀಕರಿಸಲಾಗಿದೆ. ಕೊಲೆಗಾರನನ್ನು ಪತ್ತೆ ಹಚ್ಚುವುದೇ ಚಿತ್ರದ ಕುತೂಹಲಕರ ಜರ್ನಿಯಾಗಿದೆ. ಮೂರು ಪ್ರಮುಖ ಪಾತ್ರಧಾರಿಗಳ ಮೇಲೂ ಕಥೆ ಸಾಗುತ್ತದೆ’ ಎಂದು ನಿರ್ದೇಶಕ ಅಶೋಕ್‌ ತೇಜ ಹೇಳಿದರು.

‘ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ನಿರ್ಮಾಪಕರು, ನಿರ್ದೇಶಕರು ತೆಲುಗಿನಿಂದ ಬಂದು ಈ ಸಿನಿಮಾ ಮಾಡಿದ್ದಾರೆ. ಜನರಿಗೆ ಇಷ್ಟವಾಗುವಂಥ ಕಥೆ ಇದರಲ್ಲಿದ್ದು, ನಾನು ಒಬ್ಬ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದೇನೆ. ನನ್ನ ಪಾತ್ರಕ್ಕೆ ಮತ್ತೊಂದು ಶೇಡ್ ಇದೆ. ತೆಲುಗಿನ ಪ್ರಸಿದ್ಧ ಕಾದಂಬರಿಯನ್ನಾಧರಿಸಿ ಈ ಸಿನಿಮಾ ಮಾಡಿದ್ದಾರೆ’ ಎಂದು ದಿಗಂತ್‌ ತಿಳಿಸಿದರು.

ಚಿತ್ರದಲ್ಲಿ ಒಟ್ಟು 3 ಹಾಡುಗಳಿದ್ದು, ಶ್ರೀಚರಣ್ ಪಾಕಾಲ ಅವರ ಸಂಗೀತ ನಿರ್ದೇಶನವಿದೆ. ಯೋಗಿ ಅವರ ಛಾಯಾಗ್ರಹಣ, ಕೆಜಿಎಫ್ ಖ್ಯಾತಿಯ ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT